Homeಮುಖಪುಟಘಟನೆ ದುರದೃಷ್ಟಕರ ಆದರೆ ರೈತ ಹೋರಾಟ ಕೊನೆಗೊಳ್ಳುವುದಿಲ್ಲ: ಕೇಜ್ರಿವಾಲ್

ಘಟನೆ ದುರದೃಷ್ಟಕರ ಆದರೆ ರೈತ ಹೋರಾಟ ಕೊನೆಗೊಳ್ಳುವುದಿಲ್ಲ: ಕೇಜ್ರಿವಾಲ್

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರಾಕ್ಟರ್ ಪೆರೇಡ್ ಸಂದರ್ಭ ದೆಹಲಿಯಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟರವಾಗಿದೆ. ಆದರೆ, ಕರಾಳ ಕೃಷಿ ಕಾನೂನುಗಳ ವಿರುದ್ದದ ಪ್ರತಿಭಟನೆಯು ಈ ಘಟನೆಯಿಂದ ಕೊನೆಗೊಳ್ಳುವುದಿಲ್ಲ, ಶಾಂತಿಯುತವಾಗಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

“ಜನವರಿ 26 ರಂದು ನಡೆದದ್ದು ದುರದೃಷ್ಟಕರ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ ಆ ಘಟನೆಯಿಂದ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ಆತಂಕಗಳು ಇನ್ನೂ ಅಸ್ತಿತ್ವದಲ್ಲಿವೆ, ಆದ್ದರಿಂದ ನಾವೆಲ್ಲರೂ ರೈತರನ್ನು ಶಾಂತಿಯುತವಾಗಿ ಬೆಂಬಲಿಸಬೇಕು” ಎಂದು ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ ರಾಜೀನಾಮೆ

ದೆಹಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...