Homeಮುಖಪುಟವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ...

ವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ ವಿಮಾನಯಾನ ಸಚಿವ

ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕುಚೇಷ್ಟೆ ಮಾಡಿದ್ದು, ನಿಯಮಗಳ ಗಂಭೀರ ಉಲ್ಲಂಘನೆ ಮಾಡಿದ್ದರು

- Advertisement -
- Advertisement -

ಕಳೆದ ಡಿಸೆಂಬರ್‌‌ನಲ್ಲಿ ಚೆನ್ನೈ ವಿಮಾನ ನಿಲ್ದಾಣದ ವಿಮಾನದೊಳಗಡೆ ಕುಚೇಷ್ಟೆ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಪರವಾಗಿ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿದ್ದಾರೆ. ಘಟನೆಯು ಆಕಸ್ಮಿಕವಾಗಿ ನಡೆದಿದ್ದು, ಅದಕ್ಕಾಗಿ ಅವರು ಕ್ಷಮೆಯಾಚಿಸಿದ್ದಾರೆ ಎಂದು ಸಿಂಧಿಯಾ ಹೇಳಿದ್ದಾರೆ.

ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಈ ಬಗ್ಗೆ ವರದಿ ಮಾಡಿದ ನಂತರ ವಿಮಾನಯಾನ ಸಂಸ್ಥೆ ಇಂಡಿಗೋ ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ನ್ಯೂಸ್ ಮಿನಿಟ್‌ ತನ್ನ ವರದಿಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಹೆಸರಿಸಿತ್ತೆ ವಿನಃ, ಇಂಡಿಗೋ ಹೇಳಿಕೆಯು ಯಾರನ್ನೂ ಹೆಸರಿಸಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಡಿಸೆಂಬರ್ 10, 2022 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಕ್ರಮಕ್ಕಾಗಿ ಆ ಪ್ರಯಾಣಿಕ ತಕ್ಷಣವೇ ಕ್ಷಮೆಯಾಚಿಸಿದರು. ನಿಯಮಗಳ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಹೀಗಾಗಿ ವಿಮಾನವು ಪ್ರಯಾಣಿಸಲು ವಿಳಂಬವಾಯಿತು” ಎಂದು ಇಂಡಿಗೋ ಏರ್‌ಲೈನ್ ಹೇಳಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಠೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...