Homeಮುಖಪುಟಸೆರೆ ಸಿಕ್ಕ ಚೀನಿ ಸೈನಿಕನನ್ನು ಹಸ್ತಾಂತರಿಸಿದ ಭಾರತೀಯ ಸೇನೆ

ಸೆರೆ ಸಿಕ್ಕ ಚೀನಿ ಸೈನಿಕನನ್ನು ಹಸ್ತಾಂತರಿಸಿದ ಭಾರತೀಯ ಸೇನೆ

- Advertisement -
- Advertisement -

ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಪೂರ್ವ ಲಡಾಖ್‌ನಲ್ಲಿ ಭಾರತೀಯ ಪಡೆಗಳಿಗೆ ಸಿಕ್ಕಿಬಿದ್ದಿದ್ದ ಚೀನಾದ ಸೈನಿಕನನ್ನು ಮಂಗಳವಾರ ರಾತ್ರಿ ಚೀನಾಕ್ಕೆ ಹಿಂತಿರುಗಿಸಲಾಗಿದೆ ಎಂದು ಸೇನೆ ತಿಳಿಸಿದೆ. ಸಿಕ್ಕಿಬಿದ್ದ ಸೈನಿಕನನ್ನು ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲ್ಪಟ್ಟಿದ್ದು ಚುಮರ್-ಡೆಮ್‌ಚೊಕ್‌‌ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದ ಎಂದು ಸೇನೆ ತಿಳಿಸಿತ್ತು.

ಸೈನಿಕನನ್ನು ಚೀನಾ ಸೇನೆಗೆ ಹಿಂದಿರುಗಿಸುವ ಮೊದಲು ಚೀನಾದ ತಜ್ಞರು ಸೈನಿಕನನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಭಾರತೀಯ ಸೈನ್ಯವು ಸೈನಿಕನನ್ನು ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ ನಂತರ ಪ್ರೋಟೋಕಾಲ್ ಪ್ರಕಾರ ಚೀನಾಕ್ಕೆ ಹಿಂದಿರುಗಿಸಲಾಗುವುದು ಎಂದು ಸೋಮವಾರ ಹೇಳಿತ್ತು. ಕಠಿಣ ಹವಾಮಾನ ಪರಿಸ್ಥಿತಿಗಳಿಂದ ಸೈನಿಕನನ್ನು ರಕ್ಷಿಸಲು ಆಮ್ಲಜನಕ, ಆಹಾರ ಹಾಗೂ ಬೆಚ್ಚಗಿನ ಬಟ್ಟೆಗಳು ಸೇರಿದಂತೆ ವೈದ್ಯಕೀಯ ನೆರವು ನೀಡಲಾಯಿತು ಎಂದು ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸ್ಥಳೀಯ ದನಗಾಹಿಗಳಿಗೆ ಸಹಾಯ ಮಾಡುತ್ತಿರುವಾಗ ಸೈನಿಕ ಕಾಣೆಯಾಗಿದ್ದಾನೆ ಎಂದು ಚೀನಾದ ಅಧಿಕಾರಿಯೊಬ್ಬರು ಸೋಮವಾರ ರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದರು.

ಜೂನ್‌ ತಿಂಗಳಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಹಿಂಸಾಚಾರದಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು, ಇದರಿಂದಾಗಿ ಗಡಿಯುದ್ದಕ್ಕೂ ಭಾರಿ ಉದ್ವಿಗ್ನತೆ ನೆಲೆಸಿತ್ತು. ಉದ್ವಿಗ್ನತೆಯನ್ನು ಶಮನ ಮಾಡಲು ಹಲವು ಸುತ್ತಿನ ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳು ನಡೆದಿವೆ.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...