Homeಮುಖಪುಟನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ಬಡ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳು ಜನರನ್ನು ಪರಸ್ಪರರ ವಿರುದ್ಧ ಹೋರಾಡುವಂತೆ, ಆಳುವವರು ದ್ವೇಷ ಮತ್ತು ಹಿಂಸೆಯ ವಿಷವನ್ನು ಹರಡುತ್ತಿದ್ದಾರೆ" ಎಂದು ಸೋನಿಯಾ ಹೇಳಿದ್ದಾರೆ.

- Advertisement -
- Advertisement -

ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚಾಗಿ, ದೇಶ ವಿರೋಧಿ, ಬಡವರ ವಿರೋಧಿ ಶಕ್ತಿಗಳು ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸೆಯ ವಿಷವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

“ಸ್ವಾತಂತ್ರ್ಯ ಬಂದ 75 ವರ್ಷಗಳ ನಂತರ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯಕ್ಕೆ ಸಿಲುಕಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ಹಾಳಾಗಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವವು ತೊಂದರೆಗೊಳಗಾಗುತ್ತದೆ ಎಂದು ಭಾರತದ ಸ್ಥಾಪಕ ಪಿತಾಮಹರು ಊಹಿಸಿರಲಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಚತ್ತೀಸ್‌ಘಡದ ಮುಂದಿನ ಹೊಸ ರಾಜಧಾನಿ ನವ ರಾಯಪುರದಲ್ಲಿ ಹೊಸ ಚತ್ತೀಸ್‌ಘಡ ಅಸೆಂಬ್ಲಿ ಕಟ್ಟಡದ ಅಡಿಪಾಯ ಹಾಕುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡುವಾಗ ಈ ಮೇಲಿನ ಹೇಳಿಕೆ ನೀಡಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ನಮ್ಮ ದೇಶವನ್ನು ಹಳಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಪ್ರಜಾಪ್ರಭುತ್ವದ ಮುಂದೆ ಹೊಸ ಸವಾಲುಗಳು ಬಂದಿವೆ. ಇಂದು ದೇಶವು ಅಡ್ಡಹಾದಿಯಲ್ಲಿದೆ” ಎಂದು ಅವರು ತಿಳಿಸಿದ್ದಾರೆ.

“ಬಡ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳು ಜನರನ್ನು ಪರಸ್ಪರರ ವಿರುದ್ಧ ಹೋರಾಡುವಂತೆ, ಆಳುವವರು ದ್ವೇಷ ಮತ್ತು ಹಿಂಸೆಯ ವಿಷವನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿಕೆಯ ನೆನಪು: ಇಂದು ಪ್ರಜಾಪ್ರಭುತ್ವಗಳು ಸಾಯುವ ಬಗೆ ಬದಲಾಗಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...