Homeಕರ್ನಾಟಕಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

- Advertisement -
- Advertisement -

ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಹಲವು ಮಾಧ್ಯಮಗಳ ವಿರುದ್ಧ ಸಿಐಡಿ ಎಸ್‌ಪಿ ರವಿ ಡಿ.ಚೆನ್ನಣ್ಣನವರ್‌‌ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ರವಿ ಡಿ.ಚೆನ್ನಣ್ಣವರ್‌‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ದೂರು ದಾಖಲಾಗಿದೆ ಎಂದು ತನಿಖಾ ವರದಿಗಳ ಸುದ್ದಿ ಜಾಲತಾಣ ‘ದಿ ಫೈಲ್‌.ಇನ್‌’ ವರದಿ ಮಾಡಿತ್ತು. ಆ ನಂತರದಲ್ಲಿ ಹಲವು ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದವು.

‘ದಿ ಫೈಲ್‌’ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿಪಾದಿಗಳನ್ನಾಗಿ ಹೆಸರಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ 14ರಂದು ಆದೇಶ ಹೊರಡಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು 2022ರ ಫೆಬ್ರುವರಿ 1ಕ್ಕೆ ಮುಂದೂಡಲಾಗಿದೆ ಎಂದು ‘ದಿ ಫೈಲ್‌’ ವರದಿ ತಿಳಿಸಿದೆ.


ಇದನ್ನೂ ಓದಿರಿ: ‘ಅರ್ಧದಷ್ಟು ಅತಿಥಿ ಉಪನ್ಯಾಸಕರನ್ನು ಬೀದಿಪಾಲು ಮಾಡುವ ಅನುಮಾನ ಬಲವಾಗಿಸಿದ ಸಿಎಂ ಬೊಮ್ಮಾಯಿ ಟ್ವೀಟ್‌ಗಳು’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...