Homeಕರ್ನಾಟಕಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಡಾ.ಬಿ.ಆರ್‌.ಅಂಬೇಡ್ಕರ್‌, ಮೀಸಲಾತಿ ಮತ್ತು ದಲಿತರ ಕುರಿತು ಅವಹೇಳನಕಾರಿ ಸ್ಕಿಟ್‌ ಮಾಡಿ ವಿವಾದ ಸೃಷ್ಟಿಸುವ ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗದಲ್ಲಿ ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಸ್ಕಿಟ್‌ ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಂಬೇಡ್ಕರ್‌ ಅವರನ್ನು ಅಗೌರವಿಸುವ ವಿದ್ಯಮಾನಗಳು ಆಗಾಗ್ಗೆ ಘಟಿಸುತ್ತಿವೆ. ಇವು ಉದ್ದೇಶಪೂರ್ವಕ ಘಟನೆಗಳಾಗಿವೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿತ್ತು. ಈಗ ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕಿಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ.ಗೋಪಾಲ್, ಡಾ. ರಾಮಕೃಷ್ಣಯ್ಯ, ಪ್ರೊ.ಹೊನ್ನು ಸಿದ್ದಾರ್ಥ, ಟಿ.ಎಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹ.ರ.ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಕ್, ರಾಜೇಶ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು,
ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿರಿ: ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಜೈನ್‌ ವಿವಿ, ತಪ್ಪಿತಸ್ಥರ ಬಂಧನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. It’s am immature reaction. If Gandhiji can be out to scrutiny, if Nehru can be out to scrutiny, if savarkar can be out to scrutiny, why if lord Ram himself can be put to scrutiny, why not the architect of constitution. Let him come out even brighter…

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...