Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...