Homeಮುಖಪುಟಶಬರಿಮಲೆ ಬೇಸ್ ಕ್ಯಾಂಪ್‌ನಲ್ಲಿ ₹ 6.12 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿರುವ ಕೇರಳ...

ಶಬರಿಮಲೆ ಬೇಸ್ ಕ್ಯಾಂಪ್‌ನಲ್ಲಿ ₹ 6.12 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿರುವ ಕೇರಳ ಸರ್ಕಾರ

- Advertisement -
- Advertisement -

ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್‌ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ. 

ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು ಈ ಘೋಷಣೆ ಹೊರಬಿದ್ದಿದ್ದು, ಸ್ಥಳೀಯರು ಹಾಗೂ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ನಿಲಕ್ಕಲ್‌ನಲ್ಲಿ ಟ್ರಾವಂಕೂರ್ ದೇವಸ್ವಂ ಬೋರ್ಡ್ (ಟಿಡಿಬಿ) ನೀಡಿದ ಭೂಮಿಯಲ್ಲಿ ಸುಮಾರು ₹ 6.12 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೀಣಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನಿಲಕ್ಕಲ್‌ಗೆ ಭೇಟಿ ನೀಡುವ ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಸರ್ಕಾರದ ಬದ್ಧತೆಯ ಭಾಗವಾಗಿ ಶಬರಿಮಲೆ ಬೇಸ್ ಕ್ಯಾಂಪ್ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ’ ಎಂದು ಜಾರ್ಜ್ ಹೇಳಿದ್ದಾರೆ .ಜೊತೆಗೆ ಮಂಗಳವಾರ ಆಸ್ಪತ್ರೆಯ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಟ್ಟು 10,700 ಚದರ ಅಡಿ ವಿಸ್ತೀರ್ಣದ ಈ ಕಟ್ಟಡ ಹೊರ ರೋಗಿಗಳಿಗೆ (ಒಪಿಡಿ) ಮೂರು ಕೊಠಡಿಗಳು, ತುರ್ತು ವಿಭಾಗ, ದಾದಿಯರ ಕೇಂದ್ರ, ಇಸಿಜಿ ಕೊಠಡಿ, ಐಸಿಯು ಮತ್ತು ಔಷಧಾಲಯದಂತಹ ಸೌಲಭ್ಯಗಳನ್ನು ಹೊಂದಿರುತ್ತದೆ.

ಮೊದಲ ಮಹಡಿಯಲ್ಲಿ ಎಕ್ಸ್-ರೇ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಇರಲಿದೆ. ಉದ್ಘಾಟನಾ ಸಮಾರಂಭವು ನಿಲಕ್ಕಲ್ ದೇವಾಲಯದ ಬಳಿ ನಡೆಯಲಿದೆ ಎಂದು ಹೇಳಲಾಗಿದೆ.

ಈ ಕಾರ್ಯಕ್ರಮದಲ್ಲಿ ವೀಣಾ ಜಾರ್ಜ್, ರಾಣಿ ಕ್ಷೇತ್ರದ ಶಾಸಕ ಪ್ರಮೋದ್ ನಾರಾಯಣ್, ಸಂಸದ ಆಂಟೋ ಆ್ಯಂಟನಿ, ಉಪ ಸ್ಪೀಕರ್ ಚಿತ್ತಾಯಂ ಗೋಪಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜಾರ್ಜ್ ಅಬ್ರಹಾಂ ಮತ್ತು ಟಿಡಿಬಿ ಅಧ್ಯಕ್ಷ ಪಿ.ಎಸ್ ಪ್ರಶಾಂತ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...