Homeಮುಖಪುಟಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಬಿಜೆಪಿ ಶಾಸಕ ಒ ರಾಜಗೋಪಾಲ್ ವಿಧಾನಸಭೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದ್ದರಿಂದ ಸಭಯನ್ನು ಬಹಿಷ್ಕರಿಸಿ ಹೊರ ನಡೆದರು. ನಂತರ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಯನ್ನು ಕೋರಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಪಕ್ಷದ ಕೆಲವು ಮುಖಂಡರನ್ನು ವಿಧಾನಸಭೆಯ ಹೊರಗೆ ಧರಣಿ ನಡೆಸಿದ್ದಕ್ಕಾಗಿ ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ನಿರ್ಣಯವನ್ನು ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ರಾಜ್ಯ ಸರ್ಕಾರವು ಹೆಚ್ಚಿನ ಪಾಲನ್ನು ಹೊಂದಿರುವ ಸ್ಪೆಷಲ್ ಪರ್ಪಸ್ ವೆಹಿಕಲ್ ಕಂಪನಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡಬೇಕ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

“ಕಳೆದ ಎರಡು ವರ್ಷಗಳಿಂದ ರಾಜ್ಯವು ಈ ಕ್ರಮವನ್ನು ವಿರೋಧಿಸುತ್ತಿದೆ. ನಾನು ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇಷ್ಟಾಗಿಯು ರಾಜ್ಯದ ಪ್ರತಿಭಟನೆಯನ್ನು ನಿರ್ಲಕ್ಷಿಸಿ ಖಾಸಗಿ ಘಟಕಕ್ಕೆ ಹಸ್ತಾಂತರಿಸಲಾಯಿತು. ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇರಳ ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಸಿಎಂ ನಿರ್ಣಯವನ್ನು ಪರಿಚಯಿಸಿದರು.

ಕಳೆದ ವಾರ ಕೇರಳ ಸರ್ಕಾರ ಈ ಕೇಂದ್ರದ ನಿರ್ಧಾರವನ್ನು ತಡೆಹಿಡಿಯಲು ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ಇದು ಒಂದೆರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಬರಲಿದೆ. ಅಷ್ಟೇ ಅಲ್ಲದೆ ಈ ನಿರ್ಧಾರವನ್ನು ವಿರೋಧಿಸಲು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಆದರೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ, ಖಾಸಗಿ ಕಂಪೆನಿಗೆ ನೀಡಿದರೆ ಹೆಚ್ಚು ಅಗತ್ಯವಿರುವ ಅಭಿವೃದ್ಧಿಗೆ ಸಹಾಯ ಆಗುತ್ತದೆ ಎಂದು ಹೇಳಿದ್ದರು.

ನಿರ್ಣಯವನ್ನು ಬೆಂಬಲಿಸುವಾಗ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಲಾ, ಅದೇ ಕೈಗಾರಿಕಾ ಗುಂಪು ಪ್ರತಿನಿಧಿಸುವ ಬಿಡ್ಡಿಂಗ್ ಅನ್ನು ನಿರ್ವಹಿಸಲು ಸರ್ಕಾರವು ಕಾನೂನು ಏಜೆನ್ಸಿಯನ್ನು ನೇಮಿಸಿರುವುದು ವಿಮಾನ ನಿಲ್ದಾಣವನ್ನು ಅದಾನಿ ಗುಂಪಿಗೆ ಹಸ್ತಾಂತರಿಸುವ ಕ್ರಿಮಿನಲ್ ಪಿತೂರಿ ಇದೆ ಎಂದು ಹೇಳಿದರು. ಈ ಬಗ್ಗೆ ರಾಜ್ಯ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಪ್ರತಿಕ್ರಿಯಿಸಿದ್ದು ಕಾನೂನು ಏಜೆನ್ಸಿಯ ಹಿನ್ನೆಲೆ ಬಗ್ಗೆ ಸರ್ಕಾರಕ್ಕೆ ತಿಳಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರವನ್ನು ಕೇರಳ ಸರ್ಕಾರ ಅನ್ಯಧರ್ಮಿಯರಿಗೆ ನೀಡಿದೆಯೆ?

ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸುತ್ತಿದೆ ಮತ್ತು ಅನೇಕ ಕಾನೂನು ಹೋರಾಟಗಳನ್ನು ನಡೆಸಿದೆ ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ, ಇದು ನೀತಿ ನಿರ್ಧಾರದ ಭಾಗವಾಗಿದೆ ಎಂದು ಹೇಳಿದೆ.

2019 ರ ಫೆಬ್ರವರಿಯಲ್ಲಿ, ಸರ್ಕಾರಿ ಸ್ವಾಮ್ಯದ ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ವಿಮಾನ ನಿಲ್ದಾಣಕ್ಕಾಗಿ ಮುಕ್ತ ಬಿಡ್ಡಿಂಗ್‌ನಲ್ಲಿ ಭಾಗವಹಿಸಿತ್ತು ಆದರೆ ಅದಾನಿ ಎಂಟರ್‌ಪ್ರೈಸಸ್ ಅತ್ಯಧಿಕ ಮೊತ್ತವನ್ನು ಉಲ್ಲೇಖಿಸಿ ಅದನ್ನು ಗೆದ್ದುಕೊಂಡಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಬಿಡ್ ಕಳೆದುಕೊಂಡ ನಂತರ ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಓದಿ:  ಸಹ ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....