Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...