Homeಮುಖಪುಟಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

- Advertisement -
- Advertisement -

ಕುಂಭಮೇಳವನ್ನು ಸಾಂಕೇತಿಕವಾಗಿಸಬೇಕು ಎಂದು ನಾನು ಮನವಿ ಮಾಡುತ್ತೇನೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, “ಎರಡು ಪುಣ್ಯ ಸ್ನಾನಗಳು ನಡೆದಿವೆ ಮತ್ತು ಕೊರೊನಾ ಬಿಕ್ಕಟ್ಟಿನಿಂದಾಗಿ ಕುಂಭವನ್ನು ಸಾಂಕೇತಿಕವಾಗಿ ಇಡಬೇಕೆಂದು ನಾನು ಪ್ರಾರ್ಥಿಸಿದ್ದೇನೆ. ಇದು ಈ ಬಿಕ್ಕಟ್ಟಿನಿಂದ ಹೋರಾಟಕ್ಕೆ ಬಲವನ್ನು ನೀಡುತ್ತದೆ” ಎಂದಿದ್ದಾರೆ.

“ಆಚಾರ್ಯ ಮಹಾಮಂಡಲೇಶ್ವರ ಧಾರ್ಮಿಕ ಸಭಾದ ಪೂಜ್ಯ ಸ್ವಾಮಿ ಅವಧೇಶನಂದ್ ಗಿರಿಜಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದೆ. ಎಲ್ಲಾ ಸಂತರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಎಲ್ಲಾ ಸಂತರು ಆಡಳಿತಕ್ಕೆ ಉತ್ತಮ ರೀತಿಯ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ ನಾನು ಸಂತ ಜಗತ್ತಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಮೋದಿ ತಿಳಿಸಿದ್ದಾರೆ.

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧುಗಳಿಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇತರ 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ. ಲಕ್ಷಾಂತರ ಮಂದಿ ಸೇರುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂದು ವರಿದಯಾಗಿದೆ.

ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ ಕುಂಭಮೇಳವನ್ನು ಸ್ಥಗಿತಗೊಳಿಸಬೇಕು ಎಂದು ಎಲ್ಲಾ ಕಡೆಯಿಂದಲೂ ಒತ್ತಡ ಬರುತ್ತಿದೆ. ಕುಂಭಮೇಳ ಉತ್ಸವದ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆಯನ್ನು ನೀಡುತ್ತಲೇ ಇದ್ದಾರೆ. ಕುಂಭಮೇಳಕ್ಕೆ ದೇಶಾದ್ಯಂತದ ಯಾತ್ರಾರ್ಥಿಗಳು ಬಂದು ತಮ್ಮ ರಾಜ್ಯಗಳಿಗೆ ​​ಮತ್ತು ಹಳ್ಳಿಗಳಿಗೆ ಮರಳುತ್ತಿರುವುದರಿಂದ ಇದು “ಸೂಪರ್-ಸ್ಪ್ರೆಡರ್” ಆಗಿ ಬದಲಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಆದರೆ ಉತ್ತರಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಕುಂಭಮೇಳ ಮುಂದುವರಿಯುವುದನ್ನು ಸಮರ್ಥಿಸಿಕೊಂಡಿದ್ದಾರೆ. ನಾವು ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಮಾಸ್ಕ್ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧು ಕೊರೊನಾಗೆ ಬಲಿ, 80 ಸಾಧುಗಳಿಗೆ ಸೋಂಕು ದೃಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...