Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ - ರೈತರ ಆರೋಪ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

ಆಶಿಶ್ ಮಿಶ್ರಾ ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

 

ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್‌ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.

ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...