Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...