Homeಮುಖಪುಟರಾಜ್ಯದಲ್ಲಿ ಶೀಘ್ರದಲ್ಲೇ  ಮತಾಂತರ ನಿಷೇಧ ಕಾನೂನು: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಶೀಘ್ರದಲ್ಲೇ  ಮತಾಂತರ ನಿಷೇಧ ಕಾನೂನು: ಬಸವರಾಜ ಬೊಮ್ಮಾಯಿ

- Advertisement -
- Advertisement -

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ‘ರಾಜ್ಯ ಸರ್ಕಾರವು ಇತರ ರಾಜ್ಯಗಳು ಜಾರಿಗೆ ತಂದಿರುವ ಕಾನೂನುಗಳನ್ನು ಅಧ್ಯಯನ ಮಾಡುತ್ತಿದ್ದು, ರಾಜ್ಯದಲ್ಲಿಯೂ ಶೀಘ್ರದಲ್ಲೇ ಮತಾಂತರ ನಿಷೇಧ ಕಾನೂನು ರೂಪಿಸಲಾಗುವುದು’ ಎಂದಿದ್ದಾರೆ.

ಧಾರ್ಮಿಕ ಮತಾಂತರವನ್ನು ನಿಷೇಧಿಸುವಂತೆ ಕೋರಿ ದಾರ್ಶನಿಕರ ಗುಂಪಿನೊಂದಿಗೆ ನಡೆದ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದು, ‘ಆಮಿಷವೊಡ್ಡುವುದು ಸೇರಿದಂತೆ ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ’ ಎಂದಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ ಗೌಡ ಅವರ ನೇತೃತ್ವದಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಂತೋಷ್ ಗುರೂಜಿ, ಸಿದ್ದಲಿಂಗ ಸ್ವಾಮಿ ಮತ್ತು ಪ್ರಣವಾನಂದ ಸ್ವಾಮಿಗಳು ಸೇರಿದಂತೆ ವಿವಿಧ ಹಿಂದೂ ಧಾರ್ಮಿಕ ಸಂಸ್ಥೆಗಳ 50 ಕ್ಕೂ ಹೆಚ್ಚು ಧರ್ಮದರ್ಶಿಗಳು ಬೊಮ್ಮಾಯಿ ಅವರನ್ನು ಭೇಟಿಯಾಗಿ ಧಾರ್ಮಿಕ ಮತಾಂತರವನ್ನು ನಿಷೇಧಿಸುವ ಕಾನೂನಿನ ಅಗತ್ಯವನ್ನು ವಿವರಿಸಿ, ಅದಕ್ಕಾಗಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮುತಾಲಿಕ್‌, ‘ಶಾಲೆಗಳು ಮತ್ತು ಆಸ್ಪತ್ರೆಗಳನ್ನು ಧಾರ್ಮಿಕ ಮತಾಂತರಕ್ಕೆ ಬಳಸಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಹಲವು ಅಕ್ರಮವಾಗಿ ನಿರ್ಮಿಸಲಾಗಿರುವ ಚರ್ಚ್‌ಗಳ ವಿಷಯವು ಮುನ್ನೆಲೆಗೆ ಬರುತ್ತಿವೆ’ ಎಂದಿದ್ದಾರೆ.

ಮತಾಂತರವಾದಂತಹ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾದ ವಿಶೇಷ ಸೌಲಭ್ಯಗಳನ್ನು ನಿರಾಕರಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಧಾರ್ಮಿಕ ಸಂಘರ್ಷಗಳು, ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ರೀತಿಯ ಘಟನೆಗಳನ್ನು ಸಮರ್ಥಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿಯವರೆ ಹೇಳಿಕೆ ನೀಡಿದ್ದರು. ಅದಕ್ಕೆ ವ್ಯಾಪಕ ವಿರೋಧವೂ ದಾಖಲಾಗಿತ್ತು. ಈಗ ಮತಾಂತರ ನಿಷೇಧ ಕಾನೂನು ತರುವುದಾಗಿ ಸಿಎಂ ಹೇಳಿದ್ದಾರೆ. ಬಹಳಷ್ಟು ಜನರು ಧಾರ್ಮಿಕ ಸ್ವಾತಂತ್ರ್ಯವೆಂಬುದು ಪ್ರತಿಯೊಬ್ಬರ ಹಕ್ಕಾಗಿದ್ದು ಮತಾಂತರ ಸಂವಿಧಾನಬದ್ಧ ಹಕ್ಕು ಎಂದು ಪ್ರತಿಪಾದಿಸುತ್ತಿದ್ದಾರೆ. ಹಾಗಾಗಿ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.


ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ????????ನೀವು ಕಾನೂನು ತನ್ನಿ ಮತಾಂತರ ಮಾಡೋ ಭೂತಗಳನ್ನ ನಾವು ಹಿಡಿದುಕೊಡುತ್ತೇವೆ…… ??

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...