Homeಮುಖಪುಟಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

ಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

- Advertisement -
- Advertisement -

ಕಂಪೆನಿಯೊಂದರ ಮೂರು ನಿಮಿಷದ ಝೂಮ್‌ ಸಭೆಯಲ್ಲಿ ಸುಮಾರು 900 ಉದ್ಯೋಗಿಗಳನ್ನು ಒಂದೇ ಬಾರಿಗೆ ವಜಾ ಗೊಳಿಸಿರುವ ವಿಲಕ್ಷಣ ಘಟನೆ ನಡೆದಿದೆ. ಅಮೆರಿಕ ಮೂಲದ ಸಂಸ್ಥೆಯಾದ Better.com ನ ಸಿಇಒ ವಿಶಾಲ್ ಗಾರ್ಗ್ ಅವರು ಈ ನಿರ್ಧಾರವನ್ನು ಝೂಮ್ ಸಭೆಯಲ್ಲಿ ಪ್ರಕಟಿಸಿದ್ದಾರೆ. ಮುಂಬರುವ ಕ್ರಿಸ್‌ಮಸ್‌ ಹಬ್ಬದ ಸೀಸನ್‌ಗೆ ಮುಂಚಿತವಾಗಿ ಘಟನೆ ನಡೆದಿದ್ದು ಕಂಪನಿಯ ಸಿಬ್ಬಂದಿಗೆ ತೀವ್ರ ಆಘಾತವನ್ನುಂಟುಮಾಡಿದೆ.

“ನಾನು ಉತ್ತಮ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಬರುತ್ತೇನೆ. ಮಾರುಕಟ್ಟೆ ಬದಲಾಗಿದೆ ಮತ್ತು ಬದುಕಬೇಕಾದರೆ ನಾವು ಅದರೊಂದಿಗೆ ಚಲಿಸಬೇಕಾಗಿದೆ. ಹೀಗಾದರೆ ಆಶಾದಾಯಕವಾಗಿ, ನಾವು ಅಭಿವೃದ್ಧಿ ಹೊಂದಬಹುದು ಮತ್ತು ನಮ್ಮ ಧ್ಯೇಯವನ್ನು ತಲುಪಿಸಬಹುದು” ಎಂದು ಹೇಳುತ್ತಾ ತಮ್ಮ ಕಠೋರವಾದ ಪ್ರಕಟಣೆಯನ್ನು ಹೇಳಿದ್ದಾರೆ.

ಇದನ್ನೂ ಓದಿ:ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ: ಯುಪಿ ಸರ್ಕಾರಿ ಉದ್ಯೋಗಿ ಬಂಧನ

“ನೀವು ಈ ಝೂಮ್‌ ಸಭೆಯಲ್ಲಿದ್ದರೆ, ವಜಾಗೊಳ್ಳುತ್ತಿರುವ ದುರದೃಷ್ಟಕರ ಗುಂಪಿನ ಭಾಗವಾಗಿದ್ದೀರಿ ಎಂದರ್ಥ…ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗುತ್ತದೆ” ಎಂದು ಅವರು ಸಭೆಯಲ್ಲಿ ಹೇಳಿದ್ದಾರೆ. ವಜಾಗೊಂಡಿರುವ ಉದ್ಯೋಗಿಗಳು ದಿನಕ್ಕೆ ಎರಡು ಗಂಟೆ ಮಾತ್ರ ಕೆಲಸ ಮಾಡುವುದರಿಂದ ಹೆಚ್ಚು ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಂಪನಿಯ ಗ್ರಾಹಕರಿಂದ ಅವರು ‘ಕದಿಯುತ್ತಿದ್ದಾರೆ’ ಎಂದು ವಿಶಾಲ್‌ ಗಾರ್ಗ್ ಆರೋಪಿಸಿದ್ದಾರೆ.

ರಜಾ ಅವಧಿಗೆ ಮುನ್ನವೇ ನೌಕರರನ್ನು ವಜಾಗೊಳಿಸಿರುವುದು ಬೇಸರ ತಂದಿದೆಯಾದರೂ ಅವರಿಗೆ ಸೂಕ್ತ ಸೌಲಭ್ಯ ಮತ್ತು ಪ್ಯಾಕೇಜ್ ನೀಡಲಾಗುವುದು ಎಂದು ಕಂಪನಿಯ CFO ಕೆವಿನ್ ರಯಾನ್ CNN ಬ್ಯುಸಿನೆಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಲಸ ಕಳೆದು ಕೊಂಡಿರುವವರಲ್ಲಿ ಅಮರಿಕಾ ಹಾಗೂ ಭಾರತದ ಉದ್ಯೋಗಿಗಳು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

“ಮೋಸ ಹೋದ ಅನುಭವವಾಗುತ್ತಿದೆ” ಎಂದು ಸಭೆಯಲ್ಲಿ ವಜಾಗೊಂಡ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆಂದು TNIE ವರದಿ ಮಾಡಿದೆ. “ಆಂತರಿಕವಾಗಿ ತಂಡದ ಒಡನಾಟ ತುಂಬಾ ಚೆನ್ನಾಗಿತ್ತು ಆದರೆ ಆಡಳಿತವು ನಮ್ಮನ್ನು ಕೈಬಿಟ್ಟಿದೆ” ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. “ವಿಶಾಲ್‌ ಗಾರ್ಗ್‌ ತುಂಬಾ ಕೆಟ್ಟ ಕಾರ್ಯನಿರ್ವಾಹಕನಾಗಿದ್ದು, ಒಮ್ಮೆ ತನ್ನ ಉದ್ಯೋಗಿಗಳನ್ನು ‘ಕಿವುಡ ಡಾಲ್ಫಿನ್‌ಗಳ ಗುಂಪು’ ಎಂದು ಕರೆದಿದ್ದರು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...