Homeಕರ್ನಾಟಕವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...