ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ
ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಅಡಿಯಲ್ಲಿ ರೈತರು ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆದ ನಂತರ ಕಳೆದ ವರ್ಷ ಫೆಬ್ರವರಿ 13 ರಿಂದ ಅವರು ಅಲ್ಲಿ ತಂಗಿದ್ದಾರೆ.
“ನೀವು ಇಂದು ಈ ಮಟ್ಟಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಅದೇ ರೀತಿ ಈ ಹೋರಾಟವನ್ನು ಬಲಪಡಿಸಲು ಪ್ರತಿ ಹಳ್ಳಿಯಿಂದ ಒಂದು ಟ್ರಾಲಿ ಖಾನೌರಿಗೆ ತಲುಪಬೇಕು” ಎಂದು ದಲ್ಲೆವಾಲ್ ಹೇಳಿದ್ದಾರೆ. ತಮ್ಮ ಉಪವಾಸದ ಬಗ್ಗೆ ಮಾತನಾಡಿದ ಅವರು, ದುರ್ಬಲ ದಲ್ಲೆವಾಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ, ಆದರೆ ಸ್ವಯಂಸೇವಕರು ಅದನ್ನು ವಿಫಲಗೊಳಿಸಿದರು ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಪೊಲೀಸರು ನಮ್ಮನ್ನು ಇಲ್ಲಿಂದ ಹೊರಹಾಕಲಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿದ ಅದೇ ರಾತ್ರಿ ಹಲವಾರು ಯುವಕರು ಪಂಜಾಬ್ ಮತ್ತು ಹರಿಯಾಣದಿಂದ ಖಾನೌರಿಗೆ ತಲುಪಿದ, ಹೋರಾಟದ ಉಸ್ತುವಾರಿ ವಹಿಸಿಕೊಂಡರು” ಎಂದು ದಲ್ಲೆವಾಲ್ ಹೇಳಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕಾತರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದಾರೆ, ಹಾಗಾಗಿ ಅವರ ಆರೋಗ್ಯ ಹದಗೆಡುತ್ತಿದೆ ಎಂದು ವರದಿಯಾಗಿದೆ.
ಹದಗೆಟ್ಟಿರುವ ಅವರ ಆರೋಗ್ಯವನ್ನು ಪರಿಗಣಿಸಿ ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತು ಮತ್ತು ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದೆ. ಆದಾಗ್ಯೂ, ಈ ಆದೇಶವು ದಲ್ಲೆವಾಲ್ ಅವರ ಉಪವಾಸವನ್ನು ಮುರಿಯುವ ಉದ್ದೇಶವನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಲಕ್ಷಾಂತರ ರೈತರ
“ದಲ್ಲೆವಾಲ್ ಅವರ ಜೀವ ಮುಖ್ಯ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿತ್ತು. ನಾನು ಅದೇ ದಿನ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದೆ, ನಾನು ಸಹ ಮನುಷ್ಯ, ಸರಿ, ಆದರೆ ಆತ್ಮಹತ್ಯೆ ಮಾಡಿಕೊಂಡ 7 ಲಕ್ಷ ರೈತರ ಕುಟುಂಬಗಳ ಬಗ್ಗೆ ಏನು ಹೇಳುತ್ತೀರಿ. ಭವಿಷ್ಯದಲ್ಲಿ ಈ ಆತ್ಮಹತ್ಯೆಗಳನ್ನು ನಿಲ್ಲಿಸಬೇಕಿದೆ” ಎಂದು ದಲ್ಲೆವಾಲ್ ಒತ್ತಿ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ ದಲ್ಲೆವಾಲ್ ಅವರು ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ್ದಾರೆ.
ರೈತರ ಮಹಾಪಂಚಾಯತ್ ಕಾರಣಕ್ಕೆ ಪ್ರತಿಭಟನಾ ನಿರತರು ಖಾನೌರಿಯ ಹೆದ್ದಾರಿಯ ಉದ್ದಕ್ಕೂ ನಾಲ್ಕು ಕಿಲೋಮೀಟರ್ ವಿಸ್ತಾರದಲ್ಲಿ ಹರಡಿಕೊಂಡಿದ್ದರು ಎಂದು TNIE ವರದಿ ಮಾಡಿದೆ. ಇದೇ ವೇಳೆ ದಲ್ಲೇವಾಲ್ ಅವರು ತೋಹಾನಾದಲ್ಲಿ ನಡೆದ ಸಮಾನಾಂತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಇದನ್ನೂಓದಿ: ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.
ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್


