Homeಚಳವಳಿಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ - ರೈತ ನಾಯಕ ದಲ್ಲೆವಾಲ್

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

- Advertisement -
- Advertisement -

ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ

ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಅಡಿಯಲ್ಲಿ ರೈತರು ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆದ ನಂತರ ಕಳೆದ ವರ್ಷ ಫೆಬ್ರವರಿ 13 ರಿಂದ ಅವರು ಅಲ್ಲಿ ತಂಗಿದ್ದಾರೆ.

“ನೀವು ಇಂದು ಈ ಮಟ್ಟಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಅದೇ ರೀತಿ ಈ ಹೋರಾಟವನ್ನು ಬಲಪಡಿಸಲು ಪ್ರತಿ ಹಳ್ಳಿಯಿಂದ ಒಂದು ಟ್ರಾಲಿ ಖಾನೌರಿಗೆ ತಲುಪಬೇಕು” ಎಂದು ದಲ್ಲೆವಾಲ್ ಹೇಳಿದ್ದಾರೆ. ತಮ್ಮ ಉಪವಾಸದ ಬಗ್ಗೆ ಮಾತನಾಡಿದ ಅವರು, ದುರ್ಬಲ ದಲ್ಲೆವಾಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ, ಆದರೆ ಸ್ವಯಂಸೇವಕರು ಅದನ್ನು ವಿಫಲಗೊಳಿಸಿದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೊಲೀಸರು ನಮ್ಮನ್ನು ಇಲ್ಲಿಂದ ಹೊರಹಾಕಲಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿದ ಅದೇ ರಾತ್ರಿ ಹಲವಾರು ಯುವಕರು ಪಂಜಾಬ್ ಮತ್ತು ಹರಿಯಾಣದಿಂದ ಖಾನೌರಿಗೆ ತಲುಪಿದ, ಹೋರಾಟದ ಉಸ್ತುವಾರಿ ವಹಿಸಿಕೊಂಡರು” ಎಂದು ದಲ್ಲೆವಾಲ್ ಹೇಳಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕಾತರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದಾರೆ, ಹಾಗಾಗಿ ಅವರ ಆರೋಗ್ಯ ಹದಗೆಡುತ್ತಿದೆ ಎಂದು ವರದಿಯಾಗಿದೆ.

ಹದಗೆಟ್ಟಿರುವ ಅವರ ಆರೋಗ್ಯವನ್ನು ಪರಿಗಣಿಸಿ ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತು ಮತ್ತು ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದೆ. ಆದಾಗ್ಯೂ, ಈ ಆದೇಶವು ದಲ್ಲೆವಾಲ್ ಅವರ ಉಪವಾಸವನ್ನು ಮುರಿಯುವ ಉದ್ದೇಶವನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಲಕ್ಷಾಂತರ ರೈತರ

“ದಲ್ಲೆವಾಲ್ ಅವರ ಜೀವ ಮುಖ್ಯ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿತ್ತು. ನಾನು ಅದೇ ದಿನ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದೆ, ನಾನು ಸಹ ಮನುಷ್ಯ, ಸರಿ, ಆದರೆ ಆತ್ಮಹತ್ಯೆ ಮಾಡಿಕೊಂಡ 7 ಲಕ್ಷ ರೈತರ ಕುಟುಂಬಗಳ ಬಗ್ಗೆ ಏನು ಹೇಳುತ್ತೀರಿ. ಭವಿಷ್ಯದಲ್ಲಿ ಈ ಆತ್ಮಹತ್ಯೆಗಳನ್ನು ನಿಲ್ಲಿಸಬೇಕಿದೆ” ಎಂದು ದಲ್ಲೆವಾಲ್ ಒತ್ತಿ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ ದಲ್ಲೆವಾಲ್ ಅವರು ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ್ದಾರೆ.

ರೈತರ ಮಹಾಪಂಚಾಯತ್‌ ಕಾರಣಕ್ಕೆ ಪ್ರತಿಭಟನಾ ನಿರತರು ಖಾನೌರಿಯ ಹೆದ್ದಾರಿಯ ಉದ್ದಕ್ಕೂ ನಾಲ್ಕು ಕಿಲೋಮೀಟರ್ ವಿಸ್ತಾರದಲ್ಲಿ ಹರಡಿಕೊಂಡಿದ್ದರು ಎಂದು TNIE ವರದಿ ಮಾಡಿದೆ. ಇದೇ ವೇಳೆ ದಲ್ಲೇವಾಲ್ ಅವರು ತೋಹಾನಾದಲ್ಲಿ ನಡೆದ ಸಮಾನಾಂತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...