Homeಕರ್ನಾಟಕಸರ್ಕಾರಕ್ಕೆ ರೈತರ ಒಗ್ಗಟ್ಟು ಕೊಟ್ಟ ಪೆಟ್ಟು ಮತ್ತೆ ಮರುಕಳಿಸಲಿದೆ: ಕಾರ್ಮಿಕರ ಸಮಾವೇಶ ಎಚ್ಚರಿಕೆ

ಸರ್ಕಾರಕ್ಕೆ ರೈತರ ಒಗ್ಗಟ್ಟು ಕೊಟ್ಟ ಪೆಟ್ಟು ಮತ್ತೆ ಮರುಕಳಿಸಲಿದೆ: ಕಾರ್ಮಿಕರ ಸಮಾವೇಶ ಎಚ್ಚರಿಕೆ

ಬೆಂಗಳೂರಿನಲ್ಲಿ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ ನಡೆದಿದ್ದು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯದಿದ್ದರೆ ಸರ್ಕಾರ ಮತ್ತೊಂದು ಚಳವಳಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಕಾಲ ರೈತರು ನಡೆಸಿದ ಮಹಾ ಚಳವಳಿಗೆ ಮಣಿದ ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆದ ರೀತಿಯಲ್ಲಿಯೇ ಕಾರ್ಪೋರೇಟ್‌ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಕನಿಷ್ಠ ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ರೈತ ಹೋರಾಟದಂತೆಯೇ ಕಾರ್ಮಿಕ ಚಳವಳಿಯನ್ನೂ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಮಾಸಾ) ನಾಯಕರು ಎಚ್ಚರಿಕೆ ನೀಡಿದ್ದಾರೆ.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶವು ಕಾರ್ಮಿಕ ಒಗ್ಗಟ್ಟನ್ನು ಪ್ರದರ್ಶಿಸಿತು.

ಕೇಂದ್ರೀಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿದರು. ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌, “ರೈತ ಮತ್ತು ಕಾರ್ಮಿಕ ಎಂಬ ಎರಡು ಹೆಜ್ಜೇನು ಗೂಡಿಗೆ ಇವರು ಕಲ್ಲು ಹೊಡೆದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಇವರ ವಿನಾಶಕ್ಕೆ ಇದು ನಾಂದಿಯಾಗಲಿದೆ. ಎದ್ದೇಳುವ ಹೆಜ್ಜೇನುಗಳು ಸುಮ್ಮನೆ ಬಿಡುವುದಿಲ್ಲ. ಹೀಗಾಗಲೇ ರೈತ ಜೇನುಗೂಡಿಗೆ ಕಲ್ಲು ಹೊಡೆದು ಕಚ್ಚಿಸಿಕೊಂಡು, ಮೈಯೆಲ್ಲ ಕೆರೆದುಕೊಂಡು ಒಂದು ವರ್ಷದ ಬಳಿಕ ಮೂರು ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ರೈತರು ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ನಾಟಕವನ್ನಾದರೂ ಆಡುವ ಪರಿಸ್ಥಿತಿಗೆ ಬಂದಿದ್ದಾರೆ” ಎಂದರು.

“ನಿಮಗೆ ಹೇಳಲು ಬಯಸುವುದೇನೆಂದರೆ ಈಗ ರೈತರ ರುಚಿ ನೋಡಿದ್ದೀರಿ. ಮುಂದೆ ಕಾರ್ಮಿಕರ ರುಚಿ ನೋಡಲಿದ್ದೀರಿ. ಈ ಹೆಜ್ಜೇನನ್ನು ಒಡೆಯಬಹುದೆಂಬ ಭ್ರಮೆಯಲ್ಲಿದ್ದಾರೆ. ಎಲ್ಲಾ ಕಾರ್ಮಿಕ ಸಂಘಟನೆಗಳು ಒಗ್ಗೂಡುವ ಪರಂಪರೆ ಶುರುವಾಗಿದೆ. ಎಸ್‌ಕೆಎಂ ಅಡಿಯಲ್ಲಿ ರೈತರು ಒಗ್ಗೂಡಿದಂತೆ ಕಾರ್ಮಿಕರು ಒಂದು ವೇದಿಕೆಗೆ ಬರುತ್ತಿದ್ದಾರೆ. ಈ ದೊಡ್ಡ ಶಕ್ತಿ ನಿಮ್ಮ ಮೇಲೆ ಪ್ರಹಾರ ಮಾಡಲಿದೆ. ಇಂದು ಬೆಂಗಳೂರು, ನಾಳೆ ದಿಲ್ಲಿಯಲ್ಲಿ ಹೋರಾಟ ಶುರುವಾಗಲಿದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಅಸ್ಮಿತೆಯ ಹೆಸರಲ್ಲಿ ಕಾರ್ಮಿಕರನ್ನು ಒಡೆಯುವ ಯತ್ನ: ಆರ್‌.ಮಾನಸಯ್ಯ

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷರಾದ ಆರ್‌‌.ಮಾನಸಯ್ಯ, “ದೆಹಲಿ ಗಡಿಯಲ್ಲಿ ರೈತರು ಪಟ್ಟು ಹಿಡಿದು ಕುಳಿತು ಮೋದಿ ಸರ್ಕಾರವನ್ನು ಸೋಲಿಸಿದಂತೆ ಎಲ್ಲಾ ಕಾರ್ಮಿಕರ ಸಂಟನೆಗಳನ್ನು ಒಂದು ವೇದಿಕೆಯಲ್ಲಿ ತಂದು ಅದೇ ಮಾದರಿ ಹೋರಾಟಕ್ಕೆ ಕಾರ್ಮಿಕರು ಹೋಗಬೇಕಾಗಿದೆ. ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ ಎಂದು ತಿಳಿಸಿದರು.

ಬಂಡವಾಳಶಾಹಿಗಳ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಂತಿದೆ. 44 ಕಾರ್ಮಿಕ ಕಾಯ್ದೆಗಳನ್ನು ತೆರವುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಂದಿದ್ದಾರೆ. ಈ ಸಂಹಿತೆಗಳಲ್ಲಿ ವೇತನ ಭದ್ರತೆ, ಆರೋಗ್ಯ ಸುರಕ್ಷತೆ, ಜೀವನ ಭದ್ರತೆ ಇಲ್ಲ. ಮಾಲಿಕರ, ಅಧಿಕಾರಿಗಳ, ಮೇಲ್ಜಾತಿಗಳ, ಶ್ರೀಮಂತರ ಸುರಕ್ಷತೆ ಮಾತ್ರ ಇದೆ. ಹೀಗಾಗಿ ಇದರ ವಿರುದ್ಧ ಒಂದು ದೊಡ್ಡ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಸಮಾನ ವೇತನ ನೀಡಿರೆಂದರೆ ಮೊಟ್ಟೆ ಬಗ್ಗೆ ಮಾತನಾಡುತ್ತಾರೆ: ಬಾಲನ್‌

ಸಮಾವೇಶದ ಉದ್ಘಾಟನಾ ಭಾಷಣ ಮಾಡಿದ ಹೈಕೋರ್ಟ್ ಹಿರಿಯ ವಕೀಲರಾದ ಬಾಲನ್‌, “ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ ಎಂದು ಚಾಟಿ ಬೀಸಿದರು.

ಇದನ್ನೂ ಓದಿರಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ವರದರಾಜೇಂದ್ರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಜನಸಂಘರ್ಷ ಮಂಚ್‌ನ ಸುದೇಶ್‌ಕುಮಾರಿ, ಆಂಧ್ರಪ್ರದೇಶದ ಐಎಫ್‌‌ಟಿಯು ಸಂಘಟನೆಯ ಎಸ್.ವೆಂಕಟೇಶ್ವರ ರಾವ್‌, ಉತ್ತರಾಖಾಂಡ್‌ನ ಇಂಕಿಲಾಬಿ ಮಜ್ದೂರ್‌ ಕೇಂದ್ರದ ಕೈಲಾಶ್‌, ಬಿಹಾರದ ಐಎಫ್‌ಟಿಯು ಸಂಘಟನೆಯ ಸಿದ್ಧಾಂತ್‌ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಮಿಕ ಇಲಾಖೆಯ ಡಿಎಲ್‌ಸಿ ರವಿಕುಮಾರ್‌ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಮಿಕರ ಹಕ್ಕೋತ್ತಾಯಗಳನ್ನು ಸ್ವೀಕರಿಸಿದರು.

ಸಮಾವೇಶದ ಹಕ್ಕೋತ್ತಾಯಗಳು


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...