Homeಕರ್ನಾಟಕಕೆಆರ್‌ಎಸ್‌ನ ಬೀಗ ನಮ್ಮ ಕೈಯಲ್ಲಿಲ್ಲ? ಕೇಂದ್ರದ ಕೈಯಲ್ಲಿದೆ: ಬೊಮ್ಮಾಯಿಗೆ ಡಿಕೆಶಿ ತಿರುಗೇಟು

ಕೆಆರ್‌ಎಸ್‌ನ ಬೀಗ ನಮ್ಮ ಕೈಯಲ್ಲಿಲ್ಲ? ಕೇಂದ್ರದ ಕೈಯಲ್ಲಿದೆ: ಬೊಮ್ಮಾಯಿಗೆ ಡಿಕೆಶಿ ತಿರುಗೇಟು

- Advertisement -
- Advertisement -

”ಕೆಆರ್‌ಎಸ್ ಅಣೆಕಟ್ಟಿನ ಬೀಗ ನಮ್ಮ ಕೈಯಲ್ಲಿ ಇಲ್ಲ, ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಕಾನೂನು ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೆ? ರಾಜಕಾರಣ ಯಾವ ವಿಚಾರದಲ್ಲಿ ಮಾಡಬೇಕೊ ಅದರಲ್ಲಿ ಮಾಡಬೇಕು, ಎಲ್ಲಾ ವಿಚಾರದಲ್ಲೂ ಅಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ರಾಜ್ಯದ ರೈತರ ಹಿತ ಮರೆತು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರ ಟೀಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ”ತಮಿಳುನಾಡಿಗೆ ನೀರು ಬಿಡುವವರು ನಾವಲ್ಲ‌. ಅದರ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ. ಈ ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ?” ಎಂದು ಕೇಳಿದ್ದಾರೆ.

”ರಾಜ್ಯದ ರೈತರ ಹಿತ ಕಾಪಾಡುವುದಕ್ಕೆ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈ ಕಾರಣಕ್ಕೆ ಈಗಾಗಲೇ ನಾನು ಸಚಿವನಾದ ಬಳಿಕ 2 ಬಾರಿ ಬೆಳೆಗಳಿಗೆ ನೀರು ಹರಿಸಲು ಅನುಮತಿ ನೀಡಿದ್ದೇನೆ. ತಮಿಳುನಾಡಿನವರು 27 ಟಿಎಂಸಿ ನೀರು ಕೇಳಿದ್ದಾರೆ, ಅವರು ಕೇಳಿದಷ್ಟು ನೀರು ಕೊಟ್ಟಿಲ್ಲ. ನಾವು ನಮಗೆ ಇಚ್ಛೆ ಬಂದಂತೆ ವರ್ತಿಸಿದರೆ ಕೋರ್ಟ್ ಕೇಳಬೇಕಲ್ಲ” ಎಂದಿದ್ದಾರೆ.

”ತಮಿಳುನಾಡು ಸರ್ಕಾರ ಇತ್ತೀಚೆಗೆ ನಡೆದ ಕಾವೇರಿ ಟ್ರಿಬ್ಯುನಲ್ ಸಭೆಯನ್ನು ಬಹಿಷ್ಕರಿಸಿ ಹೋಗಿದೆ. ತಮಿಳುನಾಡಿನವರು ಹೀಗೆ ಸಂಘರ್ಷ ಮಾಡಿಕೊಂಡು ಇರಲು ಆಗುತ್ತದೆಯೇ? ಸರ್ಕಾರ ನಡೆಸುವವರು ಎಲ್ಲಾ ರೀತಿಯಲ್ಲೂ ಆಲೋಚನೆ ಮಾಡಬೇಕು. ನಾವು ಕಾನೂನು ತಜ್ಞರ ಸಲಹೆ ಕೇಳಿ ಅದರ ಅನುಗುಣವಾಗಿ ಹೆಜ್ಜೆ ಇಡಬೇಕಿದೆ. ಇಲ್ಲದಿದ್ದರೆ ಇನ್ನಷ್ಟು ದೊಡ್ಡ ನಷ್ಟವನ್ನು ನಾವು ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಇದೇ ವೇಳೆ ರೈತರು ಪ್ರತಿಭಟನೆಗೆ ಮುಂದಾಗಿರುವ ವಿಚಾರದ ಬಗ್ಗೆ ಕೇಳಿದಾಗ, ”ಪ್ರತಿಭಟನೆ ಮಾಡುತ್ತಿರುವವರು ನಮ್ಮ ರೈತರೇ, ಪ್ರತಿಭಟನೆ ಅವರ ಹಕ್ಕು. ಆದರೆ ಸುಪ್ರಿಂ ಕೋರ್ಟ್ ನಮ್ಮ ಮಾತು ಕೇಳಬೇಕಲ್ಲ. ರೈತರಿಗೂ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿಂದೆಯೂ ಅನೇಕ ಬಾರಿ ಕಾನೂನು ಹೋರಾಟ ನಡೆದಿದೆ” ಎಂದು ಉತ್ತರಿಸಿದರು.

”ಕಳೆದ 30-40 ವರ್ಷಗಳಲ್ಲಿ ಈ ವರ್ಷ ಕಡಿಮೆ ಪ್ರಮಾಣದ ಮಳೆ ಬಿದ್ದಿದೆ. ಇಂತಹ ಸಂಕಷ್ಟದ ಕಾಲದಲ್ಲೂ ನಾವು ನಮ್ಮ ರಾಜ್ಯದ ರೈತರ ಪರವಾಗಿಯೂ ಇದ್ದೇವೆ ಹಾಗೂ ಕಾನೂನಿಗೂ ಗೌರವ ನೀಡುತ್ತಿದ್ದೇವೆ ಎನ್ನುವ ಕಾರಣಕ್ಕೆ ನೀರು ಬಿಡುಗಡೆ ಮಾಡಿದ್ದೇವೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...