Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...