Homeಮುಖಪುಟಸೈನಿಕರ ಸಾವು ಕಳವಳಕಾರಿ ಮತ್ತು ನೋವಿನ ವಿಷಯ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಸೈನಿಕರ ಸಾವು ಕಳವಳಕಾರಿ ಮತ್ತು ನೋವಿನ ವಿಷಯ: ರಕ್ಷಣಾ ಸಚಿವ ರಾಜನಾಥ್ ಸಿಂಗ್

- Advertisement -
- Advertisement -

ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ಹಿಂಸಾತ್ಮಕ ಮುಖಾಮುಖಿಯಲ್ಲಿ ಮೃತಪಟ್ಟ 20 ಸೈನಿಕರ ನಷ್ಟಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಮಧ್ಯಾಹ್ನ ಮೊದಲ ಬಾರಿಗೆ ಕೇಂದ್ರ ಸರ್ಕಾರದ ಪರವಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ.

“ಗಾಲ್ವಾನ್‌ನಲ್ಲಿನ ಸೈನಿಕರ ನಷ್ಟವು ತುಂಬಾ ಕಳವಳಕಾರಿ ಮತ್ತು ನೋವಿನ ಸಂಗತಿಯಾಗಿದೆ. ನಮ್ಮ ಸೈನಿಕರು ಕರ್ತವ್ಯದ ಸಾಲಿನಲ್ಲಿ ಅನುಕರಣೀಯ ಧೈರ್ಯ ಮತ್ತು ಶೌರ್ಯವನ್ನು ಪ್ರದರ್ಶಿಸಿದರು ಮತ್ತು ಭಾರತೀಯ ಸೇನೆಯ ಅತ್ಯುನ್ನತ ಸಂಪ್ರದಾಯಗಳಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ರಾಷ್ಟ್ರವು ಅವರ ಶೌರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಸೈನಿಕರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ಭಾರತದ ಧೈರ್ಯಶಾಲಿಗಳ ಧೈರ್ಯ ಮತ್ತು ದೇಶಪ್ರೇಮದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಆದರೆ ಸಚಿವರು ಗಡಿಯಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾದ ಕಡೆಯಿಂದ ಸಂಭವಿಸಿದ ಸಾವುನೋವುಗಳ ಬಗ್ಗೆ ಯಾವುದೇ ಮಾತುಗಳನ್ನಾಡಿಲ್ಲ.

ಲೈನ್ ಆಫ್ ಆಕ್ಚುಯಲ್ ಕಂಟ್ರೋಲ್ (ಎಲ್‌ಎಸಿ) ಯ ಸಿಕ್ಕಿಂ ಮತ್ತು ಲಡಾಖ್ ವಲಯಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯ ನಂತರ ಮೇ ಆರಂಭದಲ್ಲಿ ಎರಡೂ ಕಡೆಯ ನಡುವಿನ ಉದ್ವಿಗ್ನತೆ ಭುಗಿಲೆದ್ದಿತು. ಎರಡೂ ಕಡೆಯ ಬಲವರ್ಧನೆಗಳ ನಿಯೋಜನೆಯು ಸೋಮವಾರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಮುಖಾಮುಖಿಯಾಗಲು ಕಾರಣವಾಯಿತು, ಇದರಿಂದಾಗಿ ಕರ್ನಲ್ ಸೇರಿದಂತೆ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದಿಂದ ಉತ್ತರಗಳನ್ನು ಕೋರಿ ಪ್ರಶ್ನಿಸಿದ ಕೆಲವೇ ಕ್ಷಣಗಳಲ್ಲಿ ರಕ್ಷಣಾ ಸಚಿವರ ಹೇಳಿಕೆ ಕೂಡ ಬಂದಿದೆ. “ಪ್ರಧಾನಿ ಏಕೆ ಮೌನವಾಗಿದ್ದಾರೆ? ಅವರು ಯಾಕೆ ಅಡಗಿದ್ದಾರೆ? ಸಾಕು ಇನ್ನು ಸಾಕು. ಏನಾಯಿತು ಎಂದು ನಾವು ತಿಳಿದುಕೊಳ್ಳಬೇಕು. ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಭೂಮಿಯನ್ನು ತೆಗೆದುಕೊಳ್ಳಲು ಎಷ್ಟು ಧೈರ್ಯ? ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಇದನ್ನೂಓದಿ: ಕರ್ನಲ್ ಸಂತೋಷ್ ಬಾಬು ಪೋಷಕರ ಹೇಳಿಕೆ: ನಮ್ಮ ಮಗ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಕ್ಕೆ ಹೆಮ್ಮೆಯಿದೆ

ಇದನ್ನೂಓದಿ: ಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ 

ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ಇದನ್ನೂ ಓದಿ: ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ? – ರಾಹುಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...