Homeಕರ್ನಾಟಕಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

“ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು” ಎಂದು ಅವರು ಕಿಡಿಕಾರಿದ್ದಾರೆ.

“ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು” ಎಂದು ಅವರು ಹೇಳಿದ್ದಾರೆ.

“ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ವಿಡಿಯೊ ನೋಡಿ: ದುಡಿವಾಗ ಬೇಕು…. ನಡೆವಾಗ ಬೇಡ…… ಭಾರತೀಯರು ಮರೆಯಬಾರದ ಚಿತ್ರಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

0
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ...