Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...