Homeಕರ್ನಾಟಕಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದೆ

- Advertisement -
- Advertisement -

ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಚಿತ್ರದುರ್ಗದ ಮುರುಘ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯವು ಗುರುವಾರ ಮುಂದೂಡಿದೆ. ಜೊತೆಗೆ ರಾಜ್ಯ ಪೊಲೀಸರು ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಒತ್ತಡ ಹೆಚ್ಚಾಗಿದೆ.

ಅತ್ಯಾಚಾರ ಆರೋಪದ ಪ್ರಮುಖ ಆರೋಪಿಯಾಗಿರುವ ಅವರ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಕ್ರಮ  (ಎನ್‌ಸಿಪಿಸಿಆರ್) ಮತ್ತು ರಾಜ್ಯ ಮಕ್ಕಳ ಆಯೋಗವು ಚಿತ್ರದುರ್ಗ ಎಸ್ಪಿ ಪರಶುರಾಮ್ ಅವರನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಎಸ್‌ಪಿಯಿಂದ 9 ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಉತ್ತರಗಳನ್ನು ಕೇಳಿದ್ದು, ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಹೇಳಿದೆ. ಈ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಇದನ್ನೂ ಓದಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮುರುಘಾ ಶರಣರ ವಿರುದ್ಧ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಮತ್ತು ಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...