ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಲ್ಲಿನ 317 ಬಾಲಕಿಯರನ್ನು ಅಪಹರಿಸಿರುವ ಘಟನೆ ಫೆಬ್ರವರಿ 26ರಂದು ನಡೆದಿದೆ. ಈ ಕುರಿತು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೋ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.
“ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ 317 ವಿದ್ಯಾರ್ಥಿನಿಯರನ್ನು ಬಂದೂಕುಧಾರಿಗಳ ತಂಡವೊಂದು ಅಪಹರಣ ಮಾಡಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ” ಎಂದು ಪೊಲೀಸ್ ವಕ್ತಾರ ಮೊಹಮ್ಮದ್ ಶೇಷು ಹೇಳಿದ್ದಾರೆ.
ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ ಮಾತನಾಡಿ, “ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹೊಸಪೇಟೆ: ನ್ಯಾಯಾಲಯದ ಆವರಣದಲ್ಲಿಯೇ ವಕೀಲನ ಬರ್ಬರ ಹತ್ಯೆ – ಹಂತಕ ವಶಕ್ಕೆ
ಪೋಷಕರೊಬ್ಬರು, “ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕೃತ್ಯಕ್ಕೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಖಂಡನೆ ವ್ಯಕ್ತಪಡಿಸಿದ್ದು, “ನೈಜೀರಿಯಾದಲ್ಲಿನ ಮಾಧ್ಯಮಿಕ ಶಾಲೆಯೊಂದರಿಂದ 300 ಕ್ಕೂ ಹೆಚ್ಚು ಹೆಣ್ಣುಮಕ್ಕಳನ್ನು ಅಪಹರಿಸಿರುವ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಇದು ಮಾನವಹಕ್ಕುಗಳ ಉಲ್ಲಂಘನೆಯಾಗಿದೆ. ಆ ಹೆಣ್ಣುಮಕ್ಕಳನ್ನು ಆದಷ್ಟು ಬೇಗ ಅವರ ಕುಟುಂಬಗಳಿಗೆ ಹಿಂದಿರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.
I am appalled by the abduction of more than 300 girls during an attack on a secondary school in Nigeria today.
Attacks on schools are a heinous violation of human rights.
The girls must be released to their families immediately & unconditionally.
— António Guterres (@antonioguterres) February 26, 2021
ಇದನ್ನೂ ಓದಿ: ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಟ್ವಿಟರ್ ಬಿಡುತ್ತೇನೆ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್