Homeಮುಖಪುಟಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು...

ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್‌‌ ಸಿಂಗ್‌‌ ಅವರನ್ನು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ‘ದುರ್ಬಲ ಪ್ರಧಾನಿ’ ಎಂದು ಬಿಂಬಿಸಲಾಯಿತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಮಾಧ್ಯಮಗಳು ಪ್ರಶ್ನಿಸಲಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ನ್ಯಾಷನಲ್‌ ಸ್ಟೂಡೆಂಟ್ಸ್ ಯೂನಿಯನ್‌ ಆಫ್‌ ಇಂಡಿಯಾದ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಕಟ್ಟಿ-ಬೆಳೆಸಿದ ಸಂಸ್ಥೆಗಳು-ಆಸ್ತಿಗಳನ್ನು ಬಿಜೆಪಿ ಸರ್ಕಾರ ಕೇವಲ 7 ವರ್ಷಗಳಲ್ಲಿ ಮಾರಾಟ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಯಾವಾಗಲೂ ದೇಶ ಕಟ್ಟುವತ್ತ ಗಮನ ಹರಿಸುತ್ತದೆ. ಆದರೆ, ಬಿಜೆಪಿ ದೇಶವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ. ನಮ್ಮ ಪಕ್ಷದ 70 ವರ್ಷಗಳ ಶ್ರಮವನ್ನು ಬಿಜೆಪಿಯವರು ಕೇವಲ ಏಳು ವರ್ಷಗಳಲ್ಲಿ ಮಾರಾಟ ಮಾಡಿದ್ದಾರೆ ಎಂದು ರಾಹುಲ್‌ ಕಿಡಿಕಾರಿದ್ದಾರೆ.

ಪ್ರಸ್ತುತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಬಿಜೆಪಿ ಸರ್ಕಾರ ರೈತರ ಮಾತನ್ನು ಕೇಳುತ್ತಿಲ್ಲ. ಅವರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಬದಲಾಗಿ ಪ್ರತಿಪಕ್ಷಗಳ ಧ್ವನಿ ಅಡಗಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ರಾಜ್ಯಸಭಾ ಸಂಸದ ದೀಪೇಂದರ್ ಸಿಂಗ್ ಹೂಡಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಾನು ಹುತಾತ್ಮನ ಮಗ- ಹುತಾತ್ಮರಿಗೆ ಮಾಡುವ ಅವಮಾನವನ್ನು ಸಹಿಸುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...