Homeಚಳವಳಿರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

- Advertisement -
- Advertisement -

ಕೇಂದ್ರ ಸರ್ಕಾರದೊಂದಿಗೆ ಚರ್ಚೆಗೆ ಆಗಮಿಸಿದ್ದ ರೈತರು ಮಾತುಕತೆಯಿಂದ ಹೊರನಡೆದರು ಎಂಬ ಕೇಂದ್ರ ಸಚಿವರ ಮಾತನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ (AIKSCC) ನಿರಾಕರಿಸಿದ್ದು ಅದೊಂದು ದೊಡ್ಡ ಸುಳ್ಳು ಎಂದು ಹೇಳಿದೆ.

ಡಿಸೆಂಬರ್ 5 ರಂದು 3 ಕಾಯಿದೆಗಳನ್ನು ರದ್ದುಗೊಳಿಸುವ ಬೇಡಿಕೆಯನ್ನು ಪರಿಗಣಿಸಲು ಸಚಿವರು ಸ್ಪಷ್ಟವಾಗಿ ಪ್ರಸ್ತಾಪಿಸಿದ್ದರು ಆದರೆ ಮತ್ತೇ ತಮ್ಮ ಹಳೆಯ ಪ್ರಸ್ತಾಪದೊಂದಿಗೆ ಹಿಂತಿರುಗಿದರು. ಇದೀಗ ರೈತರು ಸರ್ಕಾರದ ಪ್ರಸ್ತಾಪಗಳಿಗೆ ಸ್ಫಂದಿಸಲಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು AIKSCC ಆರೋಪಿಸಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

3 ಕಾಯಿದೆಗಳು ಮತ್ತು ಇಬಿ 2020 ಅನ್ನು ರದ್ದುಗೊಳಿಸುವುದು ರೈತರ ಪ್ರಮುಖ ಬೇಡಿಕೆಯಾಗಿದೆ ಎಂದು AIKSCC ತಿಳಿಸಿದೆ.

ಸಿಂಘೂ, ಟಿಕ್ರಿ, ಘಾಝೀಪುರ್‌ ಮತ್ತು ಪಾಲ್ವಾಲ್‌‌ನಲ್ಲಿ ನಡೆಯುತ್ತಿರುವ ಧರಣಿಗೆ ಇನ್ನೂ ಹೆಚ್ಚಿನ ರೈತರು ಸೇರಲಿದ್ದಾರೆ ಎಂದಿರುವ AIKSCC, ಡಿಸೆಂಬರ್‌ 14 ರಂದು ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿರುವ ಧರಣಿ, ಜೈಪುರ- ದೆಹಲಿ ದಿಗ್ಭಂಧನ ಹಾಗೂ ಪ್ರತಿಭಟನೆಗೆ ಪೂರ್ಣ ಸಿದ್ದತೆ ನಡೆಯುತ್ತಿದೆ ಎಂದಿದೆ.

ತಮಿಳುನಾಡಿನ ರೈತರು ಧರಣಿಗೆ ಈಗಾಗಲೆ ಆಗಮಿಸಿದ್ದು, ಭಾರತದ ಬಹುತೇಕ ಎಲ್ಲ ರಾಜ್ಯಗಳ ರೈತರ ಗುಂಪುಗಳು ದೆಹಲಿ ಪ್ರತಿಭಟನೆಯಲ್ಲಿ ಸೇರಲು ಶೀಘ್ರದಲ್ಲೇ ಆಗಮಿಸಲಿವೆ ಎಂದು AIKSCC ಹೇಳಿದೆ. ಕೋಲ್ಕತ್ತಾದಲ್ಲಿ ಡಿಸೆಂಬರ್ 16 ರಂದು ರಾಜ ಭವನಕ್ಕೆ ಮೆರವಣಿಗೆಯೊಂದಿಗೆ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ, ಡಿಸೆಂಬರ್ 15 ರಂದು ಮುಂಬೈಯಲ್ಲೂ ಕೂಡಾ ಭಾರಿ ಪ್ರತಿಭಟನೆ ನಡೆಯಲಿದೆ ಎಂದು AIKSCC ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:  ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...