Homeಮುಖಪುಟಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

ಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

- Advertisement -
- Advertisement -

ಕಳೆದ ಒಂದು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಪ್ರದರ್ಶಿಸಲು ಸಿದ್ಧಪಡಿಸಿದ ಟಿಪ್ಪಣಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಉಲ್ಲೇಖಿಸದಿರುವುದರಿಂದ ಗೃಹ ಸಚಿವಾಲಯದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಲಾಗಿದೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಈಗಿರುವ ತಂಡವನ್ನು ವರ್ಗಾವಣೆ ಮಾಡಿ ಹೊಸ ತಂಡಕ್ಕೆ ಮಾಧ್ಯಮ ನಿರ್ವಹನೆ ಜವಾಬ್ದಾರಿ ನೀಡಲಾಗಿದೆ. ಇದೀಗ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ನ ವಕ್ತಾರರಾಗಿದ್ದ ನಿತಿನ್ ವಕಾಂಕರ್‌ರವರು ಡೈರೆಕ್ಟರ್ ಜನರಲ್-ಬ್ಯೂರೋ ಆಫ್ ಔಟ್‌ರೀಚ್ ಮತ್ತು ಕಮ್ಯುನಿಕೇಷನ್ಸ್‌ನ ನೇತೃತ್ವ ವಹಿಸಲಿದ್ದಾರೆ.

ಮೂಲಗಳ ಪ್ರಕಾರ ಸರ್ಕಾರವು ಮಾಧ್ಯಮ ವಿಭಾಗದ ಸರಣಿ ದೋಷಗಳಿಂದಾಗಿ ಅದರ ಬಗ್ಗೆ ತೀವ್ರ ಅತೃಪ್ತಿ ಹೊಂದಿತ್ತು. ಇದೀಗ ಅದಕ್ಕೆ ತೆರೆ ಎಳೆದಿದ್ದು ಹೊಸ ತಂಡವನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮೇ 28 ರಂದು ಗೃಹ ಸಚಿವಾಲಯದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಆಕಸ್ಮಿಕವಾಗಿ ವಿಸ್ಕಿ ತುಂಬಿದ ಎರಡು ರಾಯಲ್ ಸ್ಟಾಗ್ ಮದ್ಯದ ಬಾಟಲಿಗಳು, ಕನ್ನಡಕ ಮತ್ತು ಕೆಲವು ತಿಂಡಿಗಳನ್ನು ಹೊಂದಿರುವ ಟೇಬಲ್‌ನ ಫೋಟೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ್ದ ಅಂಫಾನ್ ಚಂಡಮಾರುತದ ನಂತರ ಸರ್ಕಾರದ ಪುನರ್ವಸತಿ ಪ್ರಯತ್ನಗಳನ್ನು ತೋರಿಸುವ ಪೋಸ್ಟ್‌ನಲ್ಲಿ ಈ ಫೋಟೊ ಸಹ ಸೇರಿಕೊಂಡಿತ್ತು.

ಆಕಸ್ಮಿಕವಾಗಿ ಈ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಕಿರಿಯ ಉದ್ಯೋಗಿಗೆ ಇದಕ್ಕಾಗಿ ಲಿಖಿತ ವಿವರಣೆಯನ್ನು ನೀಡುವಂತೆ ಕೇಳಲಾಗಿದ್ದರೂ, ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಮೇಲ್ವಿಚಾರಣೆ ಮಾಡದಿದ್ದಕ್ಕಾಗಿ ಸರ್ಕಾರವು ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ತತ್‌ಕ್ಷಣದ ಕಾರಣವಾಗಿ ಸರ್ಕಾರದ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಬಿಟ್ಟು ಹೋಗಿರುವುದು ಸರ್ಕಾರವನ್ನು ಕೆರಳಿಸಿದ್ದು, ಮಾಧ್ಯಮ ವಿಭಾಗದ ಬದಲಾವಣೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಮೊದಲೇ ಕೆಲವು ಆಂತರಿಕ ಸಮಸ್ಯೆಗಳು ಇದ್ದವು, ಆದರೆ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಅನ್ನು ಉಲ್ಲೇಖಿಸದಿರುವುದು ಒಂದು ಪ್ರಮುಖ ಅಂಶವಾಗಿರಬಹುದು ಎಂದು ಮೂಲವೊಂದು ತಿಳಿಸಿದೆ.


ಇದನ್ನೂ ಓದಿ: ಮದ್ಯ ಬಾಟಲಿಗಳ ಚಿತ್ರ ಪೋಸ್ಟ್‌ ಮಾಡಿದ ಗೃಹ ಸಚಿವಾಲಯ: ಟ್ವಿಟ್ಟರ್‌ನಲ್ಲಿ ಟ್ರೋಲ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢರ ಆಸ್ಥಾನದಲ್ಲಿ ಪುಂಗಿದಾಸರಿಗೆ ಮಾತ್ರ ಸ್ತಾನ. ಇದು ಇಂದಿನ ನೀತಿ.

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...