Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...