Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...