Homeರಾಷ್ಟ್ರೀಯ2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಕೋಮು ವಿಭಜನೆಗಳು ಹೆಚ್ಚುತ್ತಿದ್ದು, ದೇಶ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಗಳು ಈ ವಿಷಯಗಳನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡಿಲ್ಲ. ವಾಸ್ತವದಲ್ಲಿ ಬಿಜೆಪಿ ಪಕ್ಷದ ಪದಾದಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳೇ ಈ ಕೋಮುದ್ವೇಷ ಹಾಗೂ ಮುಸ್ಲಿಂ ದ್ವೇಷಗಳಿಗೆ ತುಪ್ಪ ಸುರಿಯುತ್ತಿದೆ.

ಬಿಜೆಪಿ ಆಡಳಿತದ 2016-2020ರ ಅವಧಿಯಲ್ಲಿ ಭಾರತದಲ್ಲಿ 3,399 ಕೋಮು ಗಲಭೆ ಪ್ರಕರಣಗಳು ನಡೆದಿವೆ ಎಂದು ಒಕ್ಕೂಟ ಸರ್ಕಾರ ಮಾರ್ಚ್‌ 30ರ ಮಂಗಳವಾರದಂದು ಒಪ್ಪಿಕೊಂಡಿತ್ತು. ಇದೀಗ ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ಚಂದ್ರ ಪ್ರಕಾಶ್ ಜೋಶಿ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಗೃಹ ವ್ಯವಹಾರಗಳ ಸಚಿವ ನಿತ್ಯಾನಂದ ರೈ ಈ ವಿಷಯವನ್ನು ಬಹಿರಂಗಪಡಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಗಲಭೆಗಳು ಮತ್ತು ಹತ್ಯೆಗಳ ದಾಖಲೆಯನ್ನು ಸರ್ಕಾರ ನಿರ್ವಹಿಸಿದೆಯೇ ಎಂದು ಸಂಸದರಿಬ್ಬರು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

2020ರಲ್ಲಿ 857, 2019ರಲ್ಲಿ 438, 2018ರಲ್ಲಿ 512, 2017ರಲ್ಲಿ 723 ಮತ್ತು 2016ರಲ್ಲಿ 869 ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ವರದಿಗಳನ್ನು ಉಲ್ಲೇಖಿಸಿ ಸಚಿವ ನಿತ್ಯಾನಂದ ರೈ ಅಂದು ಹೇಳಿದ್ದರು.

ಅದಕ್ಕೆ ಪೂರಕವಾಗಿ 2020ರಲ್ಲಿ 51,606, 2019ರಲ್ಲಿ 45,985, 2018ರಲ್ಲಿ 57,828, 2017ರಲ್ಲಿ 58,880 ಮತ್ತು 2016ರಲ್ಲಿ 61,974 ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಎನ್‌ಸಿಆರ್‌ಬಿಯಿಂದ ಸಾಮೂಹಿಕ ಹತ್ಯೆಯ ಯಾವುದೇ ಪ್ರತ್ಯೇಕ ಡೇಟಾವನ್ನು ನಿರ್ವಹಿಸುವುದಿಲ್ಲ ಎಂದು ಅವರು ತಿಳಿಸಿದ್ದರು.

ದೇಶದಲ್ಲಿ ಕೋಮು ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಈ ಬಗ್ಗೆ ಯಾವುದೆ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರಧಾನಿಯ ಮೌನವನ್ನು ಪ್ರಶ್ನಿಸಿದ್ದು, ದ್ವೇಷದ ಘಟನೆಗಳನ್ನು ಏಕೆ ಖಂಡಿಸಿಲ್ಲ ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear admin
    Kindly justify today’s Belgium after election trend by leftists..
    Hope u r happy for that hear.
    Demanding for Sharia law.
    Are u sleeping blaming communal insecurities.

    People are wise enough tdy know ur way out

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...