Homeಮುಖಪುಟಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿ, ಬಡವ-ಶ್ರೀಮಂತರ ಕುರಿತಂತೆ ತಾರತಮ್ಯದ ನೀತಿ ಮತ್ತು ಒಕ್ಕೂಟದ ಬದ್ಧತೆಗಳನ್ನು ನಿಭಾಯಿಸದೆ ಇರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಗಳನ್ನು ಟೀಕಿಸಿರುವ ರಾಹುಲ್ ಗಾಂಧಿ “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದಾರೆ.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

“ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ, “ಅಫ್ಘನ್ ಜೊತೆ ಸೌಹಾರ್ದ ಮತ್ತು ಸಹಕಾರ ಸಂಬಂಧಗಳನ್ನು ಭದ್ರಗೊಳಿಸಲು ನಾವು ಸಿದ್ದವಾಗಿದ್ದೇವೆ” ಎಂದು ಚೀನಾ ಹೇಳಿಕೊಂಡಿದೆ. ಇದಕ್ಕೆ ಅಫ್ಘನ್‌ನ ಹೊಸ ಸರ್ಕಾರದ ಔಪಚಾರಿಕ ಮನ್ನಣೆ ಶೀಘ್ರದಲ್ಲೇ ಸಂಭವಿಸಬಹುದು ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ.

ಇದು ಸಾಧ್ಯವಾದರೆ, ಪಾಕಿಸ್ತಾನದ ಗಡಿಯಲ್ಲಿನ ಕಾರ್ಯತಂತ್ರದ ಹೂಡಿಕೆಗಳನ್ನು ರಕ್ಷಿಸಲು ತಾಲಿಬಾನ್ ಚೀನಾಕ್ಕೆ ಸಹಾಯ ಮಾಡುತ್ತದೆ. ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳಲು ತಾಲಿಬಾನ್ ತರಬೇತಿಗೆ ಪಾಕಿಸ್ತಾನದ ಭದ್ರತಾ ಸಂಸ್ಥೆಯ ಸಹಾಯವನ್ನು ಪಡೆದಿದೆ ಎಂದು ಅನೇಕ ತಜ್ಞರು ನಂಬಿದ್ದಾರೆ. ಇವೆಲ್ಲವೂ ಸಾಮಾನ್ಯ ಬೆದರಿಕೆಗಳಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

“ಈ ವರ್ಷದ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಅತಿಥಿಗಳು ಬರಲಿಲ್ಲ. ಏಕೆಂದರೆ, ದೇಶವು ಸಂಪೂರ್ಣವಾಗಿ ಪ್ರತ್ಯೇಕವಾಗಿದೆ ಮತ್ತು ಶತ್ರುಗಳಿಂದ ಸುತ್ತುವರಿದಿದೆ, ನಾವು ನೇಪಾಳ, ಅಫ್ಘಾನಿಸ್ತಾನ, ಚೀನಾದಿಂದ ಸುತ್ತುವರೆದಿದ್ದೇವೆ. ಮಾತ್ರವಲ್ಲದೆ, ಭಾರತ ಸರ್ಕಾರವು ದೇಶದ ಜನರ ವಿರುದ್ಧವೇ ಕೆಲಸ ಮಾಡುತ್ತಿದೆ. ಇದು ದೊಡ್ಡ ಅಪರಾಧ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಹಿಂತೆಗೆದುಕೊಂಡಿದ್ದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ನಾವು ಜಮ್ಮು ಕಾಶ್ಮೀರದಲ್ಲಿ ಒಂದು ದೊಡ್ಡ ಕಾರ್ಯತಂತ್ರವನ್ನು ಜಾರಿಗೊಳಿಸಿ ತಪ್ಪನ್ನು ಮಾಡಿದ್ದೇವೆ. ಗಡಿ ರಾಜ್ಯಗಳಲ್ಲೂ ಸಂಘರ್ಷಗಳು ಹೆಚ್ಚುತ್ತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಜೈಶಂಕರ್ ಸ್ಪಷ್ಟನೆ

ರಾಹುಲ್ ಗಾಂಧಿ ಅವರ ಆರೋಪಕ್ಕೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ಒಕ್ಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಕೆಲಸ ಮಾಡಿದ ನಾಲ್ಕು ಉದಾಹರಣೆಗಳನ್ನು ಪಟ್ಟಿ ಮಾಡಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

• 1963ರಲ್ಲಿ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತ್ತು.

• 1970 ರ ದಶಕದಲ್ಲಿ ಚೀನಾ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.

• 1970 ರ ದಶಕದಿಂದಲೇ ಉಭಯ ದೇಶಗಳು ನಿಕಟ ಪರಮಾಣು ಸಹಯೋಗವನ್ನು ಹೊಂದಿವೆ.

• 2013 ರಲ್ಲಿ, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭವಾಯಿತು ಎಂದು ಜೈಶಂಕರ್ ಉಲ್ಲೇಖಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಗಣರಾಜ್ಯೋತ್ಸವದ ರಾಷ್ಟ್ರೀಯ ಅತಿಥಿ ಇರಲಿಲ್ಲವೆನ್ನುವ ಟೀಕೆಗೆ ಉತ್ತರಿಸಿದ ಅವರು, “ನಾವು ಸಾಂಕ್ರಾಮಿಕ ರೋಗದ ಮಧ್ಯದಲ್ಲಿದ್ದೇವೆ. ವಿದೇಶಿ ಅತಿಥಿಗಳು ಗಣರಾಜ್ಯೋತ್ಸವ ಆಚರಣೆಯಲ್ಲಿ ಭೌತಿಕವಾಗಿ ಜೊತೆಗಿರಲಿಲ್ಲ. ಆದರೆ, ಕಾರ್ಯಕ್ರಮಕ್ಕೆ ಬರಬೇಕಿದ್ದ 5 ಮಧ್ಯ ಏಷ್ಯಾ ರಾಷ್ಟ್ರಗಳ ಅಧ್ಯಕ್ಷರು ಜನವರಿ 27 ರಂದು ನಡೆದ ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಇದನ್ನು ರಾಹುಲ್ ಗಾಂಧಿ ಮರೆತಿದ್ದಾರೆಯೇ?” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...