Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...