Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...