Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...