ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆ ನಡೆದಿದೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಲಾಗಿದೆ.
ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುತ್ತಿದ್ದರು. ಹೋಟೆಲ್‌ನ ರಿಸೆಕ್ಷನ್‌ನಲ್ಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಅವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಚಂದ್ರಶೇಖರ ಅವರನ್ನು ಅವರ ಆಪ್ತ ಕಾರ್ಯದರ್ಶಿ ಮಹಾಂತೇಶ ಶಿರೂರ ಮತ್ತು ಆತನ ಸಹಚರ ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶನು ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ಮಾಡಿದ್ದು, ಆತನ ಹೆಂಡತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ.
ಚಂದ್ರಶೇಖರ್ ಜು. 2ರಂದು ಹೋಟೆಲ್ ನಲ್ಲಿ ರೂಮ್ ನಂ. 220 ಬುಕ್ ಮಾಡಿದ್ದರು. ಜು. 6ರಂದು ರೂಮ್ ಖಾಲಿ ಮಾಡುವವರಿದ್ದರು. ಈ ವೇಳೆ ಕೊಲೆ ಮಾಡಲಾಗಿದೆ.
ರಾಜಕಾರಣಿಗಳಿಂದ ಸಂತಾಪ
ಜ್ಯೋತಿಷಿ ಚಂದ್ರಶೇಖರ್ ಅವರ ಕೊಲೆಯನ್ನು ಖಂಡಿಸಿ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.
“ಡಾ. ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಆಘಾತ ತರಿಸಿದೆ. ಈ ದುರ್ಘಟನೆಯನ್ನು ಖಂಡಿಸುತ್ತೇನೆ. ರಾಕ್ಷಸೀಯ ಕೃತ್ಯವೆಸಗಿದವರನ್ನು ಪತ್ತೆ ಹಚ್ಚಿ ಉಗ್ರ ಶಿಕ್ಷೆ ಕೊಡಿಸಬೇಕು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ದಯಪಾಲಿಸಲಿ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಸಂತಾಪ ಸೂಚಿಸಿದ್ದಾರೆ.
ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಆಘಾತ ತರಿಸಿದೆ. ಈ ದುರ್ಘಟನೆಯನ್ನು ಖಂಡಿಸುತ್ತೇನೆ. ರಾಕ್ಷಸೀಯ ಕೃತ್ಯವೆಸಗಿದವರನ್ನು ಪತ್ತೆ ಹಚ್ಚಿ ಉಗ್ರ ಶಿಕ್ಷೆ ಕೊಡಿಸಬೇಕು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ದಯಪಾಲಿಸಲಿ. pic.twitter.com/IM8Sl5KTaw
— M B Patil (@MBPatil) July 5, 2022
“ಇಂದು ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆಗೈದಿರುವ ಸುದ್ದಿ ಕೇಳಿ ಆಘಾತವಾಯಿತು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಶೀಘ್ರ ತನಿಖೆಯಾಗಿ ಆರೋಪಿಗಳಿಗೆ ಕಾನೂನಿನಡಿ ಶಿಕ್ಷೆಯಾಗಲಿ” ಎಂದು ಸಚಿವ ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಶ್ರೀ ಚಂದ್ರಶೇಖರ್ ಗುರೂಜಿ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆಗೈದಿರುವ ಸುದ್ದಿ ಕೇಳಿ ಆಘಾತವಾಯಿತು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಶೀಘ್ರ ತನಿಖೆಯಾಗಿ ಆರೋಪಿಗಳಿಗೆ ಕಾನೂನಿನಡಿ ಶಿಕ್ಷೆಯಾಗಲಿ. pic.twitter.com/ZDBMhxziDx
— Kourava B.C.Patil (@bcpatilkourava) July 5, 2022


