Homeಕರ್ನಾಟಕನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

- Advertisement -
- Advertisement -

ಬೆಂಗಳೂರು: ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಕ್ಕಾಗಿ ನಡೆಸುತ್ತಿರುವ ಸಮೀಕ್ಷೆ ಅವಧಿಯನ್ನು ವಿಸ್ತರಿಸದೆ ಅದಷ್ಟು ಬೇಗ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌ ಒತ್ತಾಯಿಸಿದ್ದಾರೆ.

ಇಂದು (ಜೂ.20) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ರ ಮೇ 5ರಂದು ಹೊಸ ತಂತ್ರಜ್ಞಾನ ಸಹಾಯದಿಂದ ಜಿಪಿಎಸ್‌ ಬಳಸಿ ವೈಜ್ಞಾನಿಕವಾಗಿ ಸಮೀಕ್ಷೆ ಕೆಲಸ ಆರಂಭಿಸಿದ ಆಯೋಗವು ಎರಡು ಬಾರಿ ಅವದಿಯನ್ನು ವಿಸ್ತರಣೆ ಮಾಡಿದೆ. 2011ರ ಜನಗಣತಿಯ ಆಧಾರದಲ್ಲಿ ಆಯಾ ಜಿಲ್ಲೆಗಳ ಪರಿಶಿಷ್ಟರ ಜನಗಣತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿಯನ್ನು ಒದಗಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಶೇ.91-92ರಷ್ಟು ಸಮೀಕ್ಷೆ ಮುಗಿದಿದೆ ಎಂದು ಆಯೋಗವು ಹೇಳುತ್ತಿದೆ. ಇದರ ಕುರಿತೂ ಆಯೋಗವು ಸಮುದಾಯಗಳ ಮುಖಂಡರನ್ನು ಸಮೀಕ್ಷೆಯಲ್ಲಿ ಸಹಕರಿಸುವಂತೆ ಕೋರಿತ್ತು. ಈಗ ಸಮೀಕ್ಷೆಯ ಕಾಲಾವಧಿಯು ಮುಗಿಯುತ್ತಿದ್ದು, ಅವಧಿಯನ್ನು ವಿಸ್ತರಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಅವಧಿಯನ್ನು ವಿಸ್ತರಿಸಬಾರದು ಎಂದು ಕೌತಾಳ್ ಆಗ್ರಹಿಸಿದರು.

ಒಳಮೀಸಲಾತಿ ಅನುಷ್ಠಾನ ಸಂಬಂಧ 2024ರ ನವೆಂಬರ್‌ 13ರಂದು ಸರ್ಕಾರದ ಸಚಿವ ಸಂಪುಟ ಸಭೆಯು ಜಸ್ಟೀಸ್‌ ನಾಗಮೋಹನ್‌ ದಾಸ್‌ರವರ ಏಕಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೇ ವರದಿ ಬರುವವರೆಗೂ, ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ನಡೆಸದಂತೆ ತೀರ್ಮಾನಿಸಿತ್ತು. 3 ತಿಂಗಳ ಕಾಲಾವಧಿಯ ನಂತರದಲ್ಲಿ ಪರಿಶಿಷ್ಟ ಜಾತಿಗಳ ಒತ್ತಡ ಹೆಚ್ಚಾದ ಕಾರಣ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಮಧ್ಯಂತರ ವರದಿಯನ್ನು 2025ರ ಮಾ.27ರಂದು ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ಹೇಳಿದರು.

ಈ ಮಧ್ಯಂತರ ವರದಿಯ ಶಿಫಾರಸ್ಸುಗಳಲ್ಲಿ ಮುಖ್ಯವಾಗಿ ಈಗ ಲಭ್ಯವಿರುವ ಯಾವುದೇ ವರದಿ, ದತ್ತಾಂಶಗಳಲ್ಲಿ ವೈಜ್ಞಾನಿಕ ಜನಸಂಖ್ಯೆಯ ಮಾಹಿತಿ ಇಲ್ಲದ ಕಾರಣ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಬೇಕೆಂದು ತಿಳಿಸಿತ್ತು. ಇದಕ್ಕೆ ಶಾಶ್ವತ ಪರಿಹಾರವೆಂದೇ ಅರಿತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ನಿರಂತರವಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಿ 101 ಜಾತಿಗಳಿಗೂ ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿತ್ತು. ಸರ್ಕಾರವು ಜಸ್ಟೀಸ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ 60 ದಿನಗಳ ಕಾಲಾವಕಾಶ ನೀಡಿ ಸಮೀಕ್ಷೆ ನಡೆಸಲು ಆದೇಶ ನೀಡಿತ್ತು ಎಂದು ಮಾಹಿತಿ ನೀಡಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ವಿಳಂಬವನ್ನು ಮಾಡದೆ, ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಾಗಬೇಕಿದೆ. ಯಾವ ಕಾರಣಕ್ಕೂ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಬಾರದೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಸರ್ಕಾರವನ್ನೂ ಹಾಗೂ ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

30 ವರ್ಷಗಳ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ  ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿದೆ. ಅಲ್ಲದೇ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಹಲವು ಪರಿಶಿಷ್ಟ ಜಾತಿಗಳು ವಿರೋಧಿಸಿದ್ದವು. ಒತ್ತಡಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್‌ ದಾಸ್‌ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಆಯೋಗಕ್ಕೆ ಸೂಕ್ತ ಕಾರ್ಯಸೂಚಿ ನೀಡಲು, ಕಛೇರಿಯನ್ನು ಒದಗಿಸಲೂ ಹೋರಾಟ ನಡೆಸಬೇಕಾಗಿಯಿತು ಎಂದು ಮಾಹಿತಿ ಕೌತಳ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ ಉಪಸ್ಥಿತರಿದ್ದರು.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...