Homeಕರ್ನಾಟಕಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

- Advertisement -
- Advertisement -

“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.

ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...