Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...