Homeಮುಖಪುಟರೈತ ಹೋರಾಟದ ಮುಂದಿನ ಯೋಜನೆ ನ.27 ರಂದು ನಿರ್ಧಾರ: ರಾಕೇಶ್ ಟಿಕಾಯತ್

ರೈತ ಹೋರಾಟದ ಮುಂದಿನ ಯೋಜನೆ ನ.27 ರಂದು ನಿರ್ಧಾರ: ರಾಕೇಶ್ ಟಿಕಾಯತ್

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಕೊನೆಗೊಳ್ಳುವುದಿಲ್ಲ. ನಮ್ಮ ಮುಂದಿನ ಯೋಜನೆಯನ್ನು ನವೆಂಬರ್ 27ರಂದು ನಿರ್ಧರಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಬುಧವಾರ ಹೇಳಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಹಕ್ಕುಗಳ ಬಗ್ಗೆ ಪ್ರತಿಭಟನಾಕಾರರು ಕೇಂದ್ರವನ್ನು ಪ್ರಶ್ನಿಸುತ್ತಾರೆ ಟಿಕಾಯತ್ ತಿಳಿಸಿದ್ದಾರೆ.
‘ಈ ಪ್ರತಿಭಟನೆ ಇನ್ನು ಕೊನೆಗೊಂಡಿಲ್ಲ. ನಾವು ನವೆಂಬರ್27 ರಂದು ಸಭೆ ನಡೆಸಿ, ಅಲ್ಲಿ ನಮ್ಮ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 1 ರಿಂದ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದಾರೆ. ಅದು ಹೇಗೆ ಎಂಬುದನ್ನು ವಿವರಿಸಲಿ. ರೈತರು ತಮ್ಮ ಬೆಳೆಗಳಿಗೆ ಸರಿಯಾದ ಬೆಲೆಯನ್ನು ಪಡೆದಾಗ ಅವರ ಗೆಲುವು ಖಚಿತ’ ಎಂದು ಟಿಕಾಯತ್ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ನವೆಂಬರ್ನಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಳಿ, ಗಾಳಿ, ಮಳೆ, ಬಿಸಿಲನ್ನು ಲೆಕ್ಕಿಸದೇ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದಿದ್ದ ರೈತರ ಪ್ರತಿಭಟನೆಗೆ ಭಾಗಶಃ ಗೆಲುವು ದೊರೆತಿದೆ. ನರೇಂದ್ರ ಮೋದಿ ಅವರು ಕಳೆದ ವಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದರು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು ಸೇರಿದಂತೆ ಇನ್ನು ಹಲವು ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.

ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ರೈತರು ಹೋರಾಟಕ್ಕೆ ಬಂದು ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ನವೆಂಬರ್ 26 ರಂದು ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ತಿಳಿಸಿದೆ.

ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶಾಸನಬದ್ಧವಾಗಿ ಖಾತರಿಗೊಳಿಸಬೇಕು ಎಂದು ಒತ್ತಾಯಿಸಿ ಇದೇ ನವೆಂಬರ್ 29ರಂದು ನಡೆಯುತ್ತಿರುವ ಸಂಸತ್ ಚಲೋನಲ್ಲಿ ಒಟ್ಟು 60 ಟ್ಯ್ರಾಕ್ಟರ್‌ಗಳು ಸಂಸತ್ತಿಗೆ ತೆರಳಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಗಾಜಿಯಾಬಾದ್‌ನಲ್ಲಿ ಘೋಷಿಸಿದ್ದಾರೆ.


ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...