HomeಮುಖಪುಟRJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಮಂಗಳವಾರ ಹೇಳಿದ್ದರು

- Advertisement -
- Advertisement -

JDU ಪಕ್ಷದ 17 ಶಾಸಕರು ತಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, ಈಗ ಇನ್ನೊಂದು ಸ್ಫೋಟಕ ಮಾಹಿತಿಯನ್ನು ನೀಡಿದ್ದಾರೆ. “ತಮ್ಮ ಪಕ್ಷಕ್ಕೆ ಬರುವ ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೆ ಏರಲಿದೆ” ಎಂದು ಹೇಳಿದ್ದಾರೆ.

ಈ ಕುರಿತು ಆರ್‌ಜೆಡಿ ಮುಖಂಡರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು , “17 JDU ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಸಮಯದಲ್ಲಿ ನಮ್ಮ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ. ಆದರೆ ಪಕ್ಷಾಂತರ ನಿಷೇಧ ಕಾನೂನನ್ನು ಉಲ್ಲಂಘಿಸಲು ನಾವು ಬಯಸುವುದಿಲ್ಲವಾದ್ದರಿಂದ, ಅವರು 28 ಶಾಸಕರ ಗುಂಪಿನಲ್ಲಿ ಬಂದಾಗ ಮಾತ್ರ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರ ಸಂಖ್ಯೆ ಶೀಘ್ರದಲ್ಲೇ 28 ಕ್ಕೆ ಏರಲಿದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ಬಿಹಾರದ ಆಡಳಿತಾರೂಢ ಪಕ್ಷ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಪಕ್ಷಾಂತರದ ಕಾವನ್ನು ಅನುಭವಿಸಿದ ಬೆನ್ನಲ್ಲೇ, ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದರು.

“ಜೆಡಿಯು ಪಕ್ಷದೊಳಗೆ ಮತ್ತು ಪಕ್ಷದ ವ್ಯವಹಾರಗಳ ಹಿಡಿತದಲ್ಲಿ ನಿತೀಶ್ ಕುಮಾರ್ ಅವರ ನಿರಂಕುಶಾಧಿಕಾರಿ ವರ್ತನೆ ಅಲ್ಲಿನ ಬಹುಪಾಲು ಶಾಸಕರಿಗೆ ಕಿರಿಕಿರಿಯನ್ನುಂಟು ಮಾಡಿದೆ. ನಿತೀಶ್ ಕುಮಾರ್ ತಮ್ಮ ರಾಜಕೀಯ ಚಿತ್ರಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದು ವಿಧಾನಸಭಾ ಚುನಾವಣೆಗೆ ಮೊದಲು ನಿತೀಶ್ ಕುಮಾರ್ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಶಯಂ ರಾಜಕ್ ಆರೋಪಿಸಿದ್ದಾರೆ.

“ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಬೀಳಲಿದೆ. ಮಿತ್ರಪಕ್ಷಗಳ ನಡುವೆ ಅಸಮಾಧಾನ ಹೆಚ್ಚುತ್ತಿದೆ. ಆಡಳಿತದಲ್ಲಿ ಪ್ರಾಬಲ್ಯ ಸಾಧಿಸಲು ಬಿಜೆಪಿ ಮತ್ತು ಜೆಡಿಯು ನಡುವೆ ಹೆಚ್ಚುತ್ತಿರುವ ಹೋರಾಟದಿಂದಾಗಿ ಈಗ ಇದು ಅನಿವಾರ್ಯವಾಗುತ್ತಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

“ಜನವರಿ 14 ರ ನಂತರ ಜೆಡಿಯು ತನ್ನ 17 ಶಾಸಕರ ಮತ್ತೊಂದು ಪಕ್ಷಾಂತರವನ್ನು ಎದುರಿಸಬೇಕಾಗಬಹುದು. ಏಕೆಂದರೆ ನಿತೀಶ್ ಕುಮಾರ್ ತಮ್ಮ ಪಕ್ಷವನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಇತ್ತೀಚೆಗೆ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಹಾಗಾಗಿ ಆರ್‌ಜೆಡಿ ಮುಖಂಡರ ಈ ಹೇಳಿಕೆ ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಆಘಾತ ನೀಡಿದೆ.


ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ – ಯಾರಿಗೆ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...