Homeಮುಖಪುಟರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗೆ ಥಳಿಸಿದ ಅಧಿಕಾರಿ

ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗೆ ಥಳಿಸಿದ ಅಧಿಕಾರಿ

- Advertisement -
- Advertisement -

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ವಿಳಂಬವನ್ನು ವಿರೋಧಿಸಿ ನೂರಾರು ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪ್ರತಿಭಟನೆಯ ವಿಡಿಯೋ ವೈರಲ್ ಆಗಿದ್ದು, ತ್ರಿವರ್ಣ ಧ್ವಜ ಹಿಡಿದುಕೊಂಡು ನೆಲದ ಮೇಲೆ ಮಲಗಿದ್ದ ಪ್ರತಿಭಟಿಸುತ್ತಿದ್ದ ವ್ಯಕ್ತಿಗೆ ಅಧಿಕಾರಿಯೊಬ್ಬರು ಲಾಠಿಯಿಂದ ತೀವ್ರವಾಗಿ ಥಳಿಸಿ ಧ್ವಜವನ್ನು ಕಿತ್ತುಕೊಂಡಿದ್ದಾರೆ.

ಪಾಟ್ನಾದ ದಕ್ ಬಾಂಗ್ಲಾ ಚೌರಾದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪಾಟ್ನಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೆಕೆ ಸಿಂಗ್ ಎಂದು ಗುರುತಿಸಲಾದ ಅಧಿಕಾರಿ, ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ನೆಲದ ಮೇಲೆ ಮಲಗಿದ್ದ ವ್ಯಕ್ತಿಯನ್ನು ಎಳೆದು ಥಳಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಪೊಲೀಸರು ಧ್ವಜವನ್ನು ಕಿತ್ತುಕೊಳ್ಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಲಾಗಿದೆ. ಸಿಟಿಇಟಿ, ಬಿಟಿಇಟಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನೂ ಓದಿ: ವಿಡಿಯೊ➤ ಅಮಿತ್‌ ಶಾ ‘ಚಪ್ಪಲಿ’ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ!

2019ರಿಂದ ನೇಮಕಾತಿಗಾಗಿ ಕಾಯುತ್ತಿದ್ದೇವೆ ಎಂದು ಪ್ರತಿಭಟನಾ ನಿರತ ಅಭ್ಯರ್ಥಿಗಳು ತಿಳಿಸಿದ್ದು, “ಕಳೆದ 3 ವರ್ಷಗಳಿಂದ ಸರಕಾರದಿಂದ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಸರ್ಕಾರ ರಚನೆಗೂ ಮುನ್ನ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೊದಲ ಸಂಪುಟದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳುತ್ತಿದ್ದರು, ಆದರೆ ಇಲ್ಲಿಯವರೆಗೆ ಏನೂ ಆಗಿಲ್ಲ ಎಂದು ಪ್ರತಿಭಟನಾಕಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ವಿಡಿಯೊ ಬಗ್ಗೆ ವೈರಲ್ ಆಗುತ್ತಿದ್ದಂತೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್‌‌ ಅವರು ಪಾಟ್ನಾ ಸೆಂಟ್ರಲ್ ಎಸ್ಪಿ ಮತ್ತು ಡಿಡಿಸಿ ನೇತೃತ್ವದಲ್ಲಿ ವಿಚಾರಣಾ ಸಮಿತಿಯನ್ನು ರಚಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...