Homeಕರ್ನಾಟಕಮಹಿಳೆಯ ಮಾತು ಉಲ್ಲಂಘಿಸಿ ಬಿಜೆಪಿ ಬಟನ್ ಒತ್ತಿದ ಅಧಿಕಾರಿ; ಚಿತ್ತಾಪುರದಲ್ಲಿ ಆಕ್ರೋಶ

ಮಹಿಳೆಯ ಮಾತು ಉಲ್ಲಂಘಿಸಿ ಬಿಜೆಪಿ ಬಟನ್ ಒತ್ತಿದ ಅಧಿಕಾರಿ; ಚಿತ್ತಾಪುರದಲ್ಲಿ ಆಕ್ರೋಶ

- Advertisement -
- Advertisement -

ಮತ ಹಾಕಲು ಸಹಕರಿಸಲು ಹೋಗಿದ್ದ ಅಧಿಕಾರಿ ಬಿಜೆಪಿ ಬಟನ್‌ ಒತ್ತಿರುವ ಘಟನೆ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ನಡೆದಿದೆ. ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಉಗ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಮಹಿಳೆಯು ಕಾಂಗ್ರೆಸ್‌ ಬಟನ್ ಒತ್ತುವಂತೆ ಹೇಳಿದರೂ, ಅಧಿಕಾರಿ ಬಿಜೆಪಿ ಬಟನ್ ಒತ್ತಿರುವುದು ಬಯಲಾಗಿದೆ. ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರು ಅಧಿಕಾರಿಯನ್ನು ಬದಲಾಯಿಸಿದರು.

ಬಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದರು. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಅನ್ನು ಬಿ.ಸಿ.ಚವ್ಹಾಣ್ ಒತ್ತಿದ್ದಾನೆ. ಅದು ವೃದ್ಧೆಯ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಅಧಿಕಾರಿಯ ದುಷ್ಕೃತ್ಯ ಬಯಲಿಗೆ ಬಂದಿದೆ.

ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಯ ಸುಮಾರು ಐವತ್ತಕ್ಕೂ ಅಧಿಕ ಅಧಿಕ ಮತ ಹಾಕಲಾಗಿದೆ ಎಂದು ಹೇಳಲಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಅದನ್ನು ಡಿಲೀಟ್ ಮಾಡಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಭಗವಾನ್ ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಸ್ಥಳಕ್ಕೆ ಬಂದ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಬದಲಾಯಿಸುವಂತೆ ಚುನಾವಣಾ ಅಧಿಕಾರಿ ಮೇಲೆ ಒತ್ತಡ ಹೇರಿದ ಮೇಲೆ ಅವರನ್ನು ಬದಲಾಯಿಸಲಾಯಿತು. ಆರೋಪಿ ಚೌವ್ಹಾಣ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರವು ಹಲವು ಕಾರಣಗಳಿಗೆ ಈಗಾಗಲೇ ಸುದ್ದಿಯಾಗಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಣಿಕಂಠ ರಾಠೋಡ್‌ ರೌಡಿ ಶೀಟರ್‌ ಆಗಿದ್ದಾನೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಮಣಿಕಂಠ ವಿರುದ್ಧ ಬಂದಿದೆ. ಈ ಕುರಿತು ರಾಜಸ್ಥಾನದಲ್ಲಿ ಪ್ರಕರಣ ದಾಖಲಾಗಿದೆ.

‘ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್‌ ಮಾಡ್ತೀನಿ…’ ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹೇಳಿರುವ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ರಾಥೋಡ್ ಮೇಲೆ 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಅವರೇ ಘೋಷಿಸಿಕೊಂಡಿದ್ದಾರೆ. ಮೂಲತಃ ಯಾದಗಿರಿಯವರಾದ ಅವರ ಮೇಲೆ ಕಳ್ಳತನ, ಅಕ್ಕಿ, ಹಾಲಿನ ಪುಡಿ ಅಕ್ರಮ ಸಾಗಾಣೆ, ಕೊಲೆ ಬೆದರಿಕೆ ಸೇರಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಅಂತಹ ಬಿಜೆಪಿ ಅಭ್ಯರ್ಥಿಯ ಪರವಾಗಿ ಬಟ್‌ ಒತ್ತಿರುವ ಅಧಿಕಾರಿ ಈಗ ಸಿಕ್ಕಿಬಿದ್ದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...