Homeಕರ್ನಾಟಕಇಂದೂ ನಡೆಯುತ್ತಿರುವ #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಇಂದೂ ನಡೆಯುತ್ತಿರುವ #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗವು ರಾಜ್ಯಾಧ್ಯಕ್ಷರಾದ ನಾರಾಯಣಗೌಡ್ರು ಟಿ.ಎ. ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರನ್ನು ಭೇಟಿ ಮಾಡಿ ಅಭಿಯಾನದ ಹಕ್ಕೊತ್ತಾಯವನ್ನು ಸಲ್ಲಿಸಿತು.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೀಡಿದ್ದ ಕರೆಗೆ ಇಂದೂ ಕೂಡಾ ಭಾರಿ ಜನ ಬೆಂಬಲ ವ್ಯಕ್ತವಾಗಿದೆ. ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ.

“ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ” ಎಂದು ಡಿಸೆಂಬರ್‌ 17 ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ. ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಟ್ಟಿದ್ದರು. ಈ ಅಭಿಯಾನ ಇಂದೂ ಕೂಡಾ ಮುಂದುವರೆದಿದೆ.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಅಭಿಯಾನಲ್ಲಿ ಭಾಗವಹಿಸಿದವರಿಗೆ ನಿನ್ನೆ ಕೃತಜ್ಞತೆಗಳನ್ನು ತಿಳಿಸಿರುವ ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು,”ಕರವೇ ನಿಯೋಗದೊಂದಿಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದೇನೆ. ಸರ್ಕಾರ ಕನ್ನಡ ವಿವಿಗೆ ಅಗತ್ಯ ಅನುದಾನ ನೀಡದಿದ್ದರೆ ಬೀದಿಹೋರಾಟ ಅನಿವಾರ್ಯ” ಎಂದು ಹೇಳಿದ್ದರು.

ಹಂಪಿ ವಿಶ್ವವಿದ್ಯಾಲಯದ ಪರವಾಗಿ ಧ್ವನಿ ಎತ್ತಿರುವ ಸಿದ್ದರಾಮಯ್ಯ, “ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ, ಅವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೆರವಾಗಬೇಕು” ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಜಯನಗರ ಶಾಸಕಿ ಸೌಮ್ಯ ರೆಡ್ಡಿ ಕೂಡಾ ಟ್ವಿಟ್ಟರ್‌ ಅಭಿಯಾನಕ್ಕೆ ತಮ್ಮ ಬೆಂಬಲ ನೀಡಿದ್ದು, “ಹಂಪಿ ಕನ್ನಡ ವಿಶ್ವವಿದ್ಯಾಲಯವು ಕನ್ನಡ ವಿದ್ವತ್ ಲೋಕದ ಸಂಕೇತ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಚಂದ್ರಶೇಖರ್ ಕಂಬಾರ, ದಿವಂಗತ ಎಂ.ಎಂ ಕಲಬುರ್ಗಿ ಮುಂತಾದ ಹಿರಿಯ ವಿದ್ವಾಂಸರು ಕಟ್ಟಿದ ಹೆಮ್ಮೆಯ ವಿದ್ಯಾ ಕೇಂದ್ರವದು. ಕನ್ನಡ ನಾಡು-ನುಡಿ, ಜಾನಪದ ಸಂಸ್ಕೃತಿಗಳ ಕುರಿತು ಅನೇಕ ಸಂಶೋಧನಾ ವಿದ್ಯಾರ್ಥಿಗಳಿಗೆ ತಾಯಿಯಾದ ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ ಕಡಿತ ಮಾಡಿರುವುದು ನಿಜಕ್ಕೂ ಖಂಡನೀಯ. ಈ ಕೂಡಲೇ ಸರ್ಕಾರ ವಿಶ್ವವಿದ್ಯಾಲಯಕ್ಕೆ ನೀಡಬೇಕಿರುವ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.‌

 

ಇಂದು ಕರ್ನಾಟಕ ರಕ್ಷಣಾ ವೇದಿಕೆ ನಿಯೋಗವು ರಾಜ್ಯಾಧ್ಯಕ್ಷರಾದ ನಾರಾಯಣಗೌಡ್ರು ಟಿ.ಎ. ಅವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರನ್ನು ಭೇಟಿ ಮಾಡಿ ಅಭಿಯಾನದ ಹಕ್ಕೊತ್ತಾಯವನ್ನು ಸಲ್ಲಿಸಿತು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಇದನ್ನೂ ಓದಿ:ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ: ಪ್ರೊ.ಶಿವರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...