Homeಮುಖಪುಟಇಂದು ಖಾಸಗೀ ಆಸ್ಪತ್ರೆಗಳ ಒಪಿಡಿ ಬಂದ್: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ವೈದ್ಯರ ಮುಷ್ಕರ!

ಇಂದು ಖಾಸಗೀ ಆಸ್ಪತ್ರೆಗಳ ಒಪಿಡಿ ಬಂದ್: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ವೈದ್ಯರ ಮುಷ್ಕರ!

ಹಲ್ಲಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಮುಂತಾದ ಸಾಮಾನ್ಯ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲು ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಅನುಮತಿ ನೀಡಿತ್ತು

- Advertisement -
- Advertisement -

ಶಸ್ತ್ರ ಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಭಾರತೀಯ ವೈದ್ಯಕೀಯ ಒಕ್ಕೂಟದ (IMA) ವತಿಯಿಂದ ಮುಷ್ಕರ ನಡೆಸಲು ಕರೆ ನೀಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಹಲ್ಲಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಮುಂತಾದ ಸಾಮಾನ್ಯ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲು ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಅನುಮತಿ ನೀಡಿತ್ತು. ಈ ಕುರಿತು ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಸಂಸ್ಥೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿ ಇಂದು ದೇಶವ್ಯಾಪಿ ಖಾಸಗೀ ಆಸ್ಪತ್ರೆಗಳು ಮುಷ್ಕರ ನಡೆಸಲಿವೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

IMA ಕರೆ ನೀಡರುವ ಮುಷ್ಕರಕ್ಕೆ ಖಾಸಗೀ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಅಲೋಪತಿ ವೈದ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಹಾಗಾಗಿ ರಾಜ್ಯದ ಬಹುತೇಕ ಖಾಸಗೀ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗಗಳು (ಒಪಿಡಿ) ಸ್ಥಗಿತಗೊಳ್ಳಲಿವೆ. ಆದರೆ ಒಳರೋಗಿ ವಿಭಾಗಗಳಲ್ಲಿ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಆದರೆ ಸರ್ಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಎಲ್ಲಾ ರೀತಿಯ ಸೇವೆಗಳೂ ದೊರೆಯಲಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...