Homeಮುಖಪುಟ'ಪ್ರತಿಪಕ್ಷಗಳಿಗೂ ದೇಣಿಗೆ ಸಿಕ್ಕಿದೆ, ಇದು ಸುಲಿಗೆಯೇ..?'; ಚುನಾವಣಾ ಬಾಂಡ್ ವ್ಯವಸ್ಥೆ ಸಮರ್ಥಿಸಿಕೊಂಡ ಅಮಿತ್ ಶಾ

‘ಪ್ರತಿಪಕ್ಷಗಳಿಗೂ ದೇಣಿಗೆ ಸಿಕ್ಕಿದೆ, ಇದು ಸುಲಿಗೆಯೇ..?’; ಚುನಾವಣಾ ಬಾಂಡ್ ವ್ಯವಸ್ಥೆ ಸಮರ್ಥಿಸಿಕೊಂಡ ಅಮಿತ್ ಶಾ

- Advertisement -
- Advertisement -

ಸುಪ್ರೀಂಕೋರ್ಟ್‌ ಆದೇಶದ ನಂತರ ರದ್ದುಗೊಂಡಿರುವ ಚುನಾವಣಾ ಬಾಂಡ್‌ಗಳ ವ್ಯವಸ್ಥೆಯ ಕುರಿತು ಪ್ರತಿಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

‘ಬಾಂಡ್‌ಗಳ ಮೂಲಕ ವಿರೋಧ ಪಕ್ಷಗಳು ಪಡೆದ ದೇಣಿಗೆಯನ್ನು “ಸುಲಿಗೆ” ಎಂದು ವಿವರಿಸುತ್ತವೆಯೇ’ ಎಂದು ಪ್ರಶ್ನಿಸುವ ಮೂಲಕ ಚುನಾವಣಾ ಬಾಂಡ್ ವ್ಯವಸ್ಥೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಡಿದ ಶಾ, ಚುನಾವಣಾ ಬಾಂಡ್‌ಗಳ ವ್ಯವಸ್ಥೆಯು ವಿಶ್ವದ ಅತಿದೊಡ್ಡ ಸುಲಿಗೆ ಯೋಜನೆ, ಪ್ರಧಾನಿ ನರೇಂದ್ರ ಮೋದಿಯನ್ನು “ಭ್ರಷ್ಟಾಚಾರದ ಚಾಂಪಿಯನ್” ಎಂದು ಕರೆದ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರಿಗೆ ಅವರು ತಿರುಗೇಟು ಕೊಟ್ಟಿದ್ದಾರೆ.

“ವಿರೋಧ ಪಕ್ಷಗಳು ಸಹ ಬಾಂಡ್‌ಗಳ ಮೂಲಕ ದೇಣಿಗೆ ಪಡೆದಿವೆ, ಅದು ಸುಲಿಗೆ ಕೂಡ ಆಗಿದೆಯೇ? ರಾಹುಲ್ ಗಾಂಧಿ ಜನರಿಗೆ ಹೇಳಬೇಕು. ಅವರ ಸಂಸದರ ಸಂಖ್ಯೆಗೆ ಅನುಗುಣವಾಗಿ ಅವರು ಪಡೆದಿರುವ ದೇಣಿಗೆ ಅವರ ಬಳಿ ಇಲ್ಲ, ನಮ್ಮ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ” ಎಂದು ಹೇಳಿದ್ದಾರೆ.

“ಫೆಬ್ರವರಿ 15 ರಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ಆಧಾರದ ಮೇಲೆ ರದ್ದುಗೊಳಿಸಿತು. ಈ ಯೋಜನೆಯು ಅಸಾಂವಿಧಾನಿಕ ಮತ್ತು ಅನಿಯಂತ್ರಿತವಾಗಿದೆ. ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವೆ ಕ್ವಿಡ್ ಪ್ರೊ ಕ್ವೊ ವ್ಯವಸ್ಥೆಗೆ ಕಾರಣವಾಗಬಹುದು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದರು.

ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕಪ್ಪುಹಣದ ವಿರುದ್ಧ ಹೋರಾಡುವ ಉದ್ದೇಶ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವುದು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಕಪ್ಪುಹಣವನ್ನು ತಡೆಯುವ ಏಕೈಕ ಮಾರ್ಗವಲ್ಲ ಎಂದು ನ್ಯಾಯಾಲಯ ಹೇಳಿದೆ.

ನಂತರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಮತ್ತು ಭಾರತೀಯ ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದ ದತ್ತಾಂಶದಲ್ಲಿ, 2018 ರಲ್ಲಿ ಪರಿಚಯಿಸಿದಾಗಿನಿಂದ ಬಿಜೆಪಿಯು ಈ ಬಾಂಡ್‌ಗಳ ಮೂಲಕ ₹6,986.5 ಕೋಟಿ ಮೊತ್ತದ ಗರಿಷ್ಠ ಹಣವನ್ನು ಪಡೆದಿದೆ. ತೃಣಮೂಲ ಕಾಂಗ್ರೆಸ್ ₹1,397 ಕೋಟಿ ಮತ್ತು ಕಾಂಗ್ರೆಸ್ ₹1,334 ಕೋಟಿ ದೇಣಿಗೆ ಪಡೆದಿವೆ.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಜೈಲಿನಲ್ಲಿ ಸಂಚು, ಏನು ಬೇಕಾದರೂ ಆಗಬಹುದು: ಸಂಜಯ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...