Homeಕರ್ನಾಟಕಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

- Advertisement -
- Advertisement -

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಇರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದರೆ, ಮತ್ತೊಂದೆಡೆ ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಮತ್ತು ಟಿಡಿಪಿ (ತೆಲುಗು ದೇಶಂ ಪಕ್ಷ) ಪ್ರಧಾನಿ ಮೋದಿ ಪರ ನಿಂತಿವೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಈಗಾಗಲೇ ಘೋಷಿಸಿವೆ.

ನೂತನ ಸಂಸತ್‌ ಭವನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುವ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವುದು ಸರಿಯಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಮೇ 28ರಂದು ನೂತನ ಸಂಸತ್‌ ಭವನ ಉದ್ಘಾಟಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡಿಲ್ಲ. ಇದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ವಿರೋಧ ಪಕ್ಷಗಳ ನಿಲುವನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ನೂತನ ಭವನವನ್ನು ನಿರ್ಮಾಣ ಮಾಡಿರುವ ಕೇಂದ್ರ ಸರ್ಕಾರವು, ಉದ್ಘಾಟನೆ ಮಾಡುವ ಹಕ್ಕನ್ನೂ ಹೊಂದಿದೆ” ಎಂದು ಪ್ರತಿಪಾದಿಸಿದ್ದಾರೆ.

“ಉದ್ಘಾಟನೆ ಸಮಾರಂಭದ ವಿಚಾರವನ್ನು ವಿರೋಧ ಪಕ್ಷಗಳು ಆದಿವಾಸಿ ಮಹಿಳೆಯ ಘನತೆಯೊಂದಿಗೆ ತಳುಕು ಹಾಕುತ್ತಿರುವುದು ಸರಿಯಲ್ಲ. ರಾಷ್ಟ್ರಪತಿ ಚುನಾವಣೆ ವೇಳೆ ಅವಿರೋಧ ಆಯ್ಕೆಗೆ ವಿರೋಧ ಪಕ್ಷಗಳು ಅನುವು ಮಾಡಿಕೊಟ್ಟಿರಲಿಲ್ಲ ಎಂಬುದನ್ನೂ ಯೋಚಿಸಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೆ ತಮಗೂ ಆಹ್ವಾನ ನೀಡಿರುವುದನ್ನು ಸ್ವಾಗತಿಸಿರುವ ಮಾಯಾವತಿ, “ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳ ಕಾರಣದಿಂದಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅಧಿಕಾರಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌, ಒಡಿಶಾದ ಬಿಜು ಜನತಾದಳ, ತೆಲುಗು ದೇಶಂ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿವೆ.

ಇದನ್ನೂ ಓದಿರಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳೇ ಉದ್ಘಾಟಿಸಬೇಕೆಂದು ನಿರ್ದೇಶನ ನೀಡುವಂತೆ ಸುಪ್ರೀಂಗೆ ಪಿಐಎಲ್

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ಗುರುವಾರ ತಿಳಿಸಿದೆ.

ನಮ್ಮ ಪಕ್ಷದ ರಾಜ್ಯಸಭಾ ಸಂಸದ ರವೀಂದ್ರ ಕುಮಾರ್ ಅವರಿಗೆ ಸೂಚನೆ ನೀಡಲಾಗಿದ್ದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಪ್ರಧಾನ ಕಾರ್ಯದರ್ಶಿ ಅವರಿಂದ ಆಹ್ವಾನ ಸ್ವೀಕರಿಸಲಾಗಿದೆ. ಈಗಾಗಲೇ ರವೀಂದ್ರ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದೆ ಎಂದು ಬುಧವಾರ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...