Homeಕರ್ನಾಟಕಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

ಕೊರಗರದ್ದು ಇನ್ನೊಂದು “ಜೈ ಭೀಮ್” ಕಥೆ ಆಗದಿರಲಿ ಎಂದು ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಾ.ಎಚ್‌.ಸಿ.ಮಹದೇವಪ್ಪ ಎಚ್ಚರಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ಅವರು, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೋಟಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಅಲ್ಲಿನ ಕೊರಗ ಸಮುದಾಯದ ಮೇಲೆ ಪೊಲೀಸರು ಪ್ರಹಾರ ನಡೆಸಿದ್ದರು. ಇಂತಹ ಹೀನ ಕೃತ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳಿನ ಪ್ರಕರಣವಾಗಿ ಕಾಣುತ್ತಿದೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಲಾಗಿದೆ. ಒಂದು ವೇಳೆ ಪೊಲೀಸರ ಮೇಲೆ ಕೊರಗರು ಹಲ್ಲೆ ನಡೆಸಿದ್ದೇ ನಿಜವಾದರೆ, ಈ ಸಂಗತಿಯನ್ನು ಪೊಲೀಸರು ಅಂದೇ ಏಕೆ ತಿಳಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಯಾವ ಕಾರಣಕ್ಕೆ ಸಚಿವರ ಹೇಳಿಕೆಗಳು ಪ್ರಕಟಗೊಂಡ ಮೇಲೆ ಈ ರೀತಿ ಹೇಳಿಕೆ ನೀಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂಬುದರ ಬಗ್ಗೆ ಸರಿಯಾದ ಸ್ಪಷ್ಟತೆ ಇಲ್ಲ. ಮೇಲಾಗಿ ಕೊರಗರು ಮೃದು ಸ್ವಭಾವದವರೂ ಆಗಿರುವುದು ಇಲ್ಲಿನ ಅನುಮಾನಗಳಿಗೆ ಮೂಲ ಕಾರಣ ಎಂದು ಎಂದು ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದೊಂದು ಸುಳ್ಳು ಪ್ರಕರಣ ಎಂದೇ ನನಗೆ ಅನಿಸುತ್ತಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರು ಕೊರಗರ ಪರವಾಗಿ ನಿಲ್ಲಲು ಕೋರುತ್ತೇನೆ. ಇನ್ನು ಹಲ್ಲೆ ಯಾರ ಮೇಲೆ ನಡೆದಿದ್ದರೂ ಅದು ತಪ್ಪೇ. ಆದರೆ ಇದನ್ನೇ ಸುಳ್ಳು ಬಂಡವಾಳವಾಗಿಟ್ಟುಕೊಂಡು ಪ್ರಕರಣ ದಾಖಲಿಸುವ, ಅದರಲ್ಲೂ ಜಾಮೀನು ರಹಿತ ಪ್ರಕರಣ ದಾಖಲಿಸುವುದು ನಿಜಕ್ಕೂ ಅನ್ಯಾಯದ ಪರಮಾವಧಿ ಮತ್ತು ಕೆಳ ಸಮುದಾಯದ ಮೇಲೆ ನಡೆದ ದೌರ್ಜನ್ಯವೇ ಆಗಿರುತ್ತದೆ ಎಂದಿದ್ದಾರೆ.

ಈ ಕೋಮುವಾದಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಜನ ಸಮುದಾಯಗಳಿಗೆ ಅಷ್ಟಾಗಿ ರಕ್ಷಣೆ ಇಲ್ಲದಿರುವಾಗ ಇಂತಹ ಘಟನೆಗಳು ನಡೆದಿಲ್ಲ ಎಂದುಕೊಳ್ಳಲು ಆಗದು. ಹೀಗಾಗಿಯೇ ಕಾಂಗ್ರೆಸ್ ಪಕ್ಷವು ನೊಂದ ಸಮುದಾಯದ ಪರವಾಗಿ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಕಲಿ ಪ್ರಕರಣ ದಾಖಲಿಸಲು ಹೊರಟಿರುವ ಪೊಲೀಸರು ಮತ್ತು ಸವರ್ಣೀಯರ ಹಿತಾಸಕ್ತಿಯನ್ನು ಕಾಪಾಡಲು ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡಲೇ ಅವರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಎಲ್ಲಾ ದಲಿತ ಸಂಘರ್ಷ ಸಮಿತಿಗಳ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, “ಕೊರಗರ ಕಥೆ ಇನ್ನೊಂದು ಜೈ ಭೀಮ್ ಸಿನಿಮಾದ ಪ್ರಕರಣದಂತೆ ಆಗದಿರಲಿ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...