Homeಮುಖಪುಟಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

- Advertisement -
- Advertisement -

ರಾಜ್ಯದಲ್ಲಿ ಪಕ್ಷವು ಮತ್ತೆ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ ಎಂದು ಪಶ್ಚಿಮ ಬಂಗಾಳದ ಸಿಪಿಐಎಂ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಕಷ್ಟದ ಹಂತವನ್ನು ಎದುರಿಸುತ್ತಿದ್ದು, ಪಕ್ಷಕ್ಕೆ ಕಾಯಕಲ್ಪ ನೀಡುವುದು ಮತ್ತು ಅದನ್ನು ಮತ್ತೆ ಕ್ರಿಯಾಶೀಲಗೊಳಿಸುವುದು ಪಕ್ಷವು ಪ್ರಸ್ತುತ ಎದುರಿಸುತ್ತಿರುವ ತಕ್ಷಣದ ಸವಾಲುಗಳಾಗಿವೆ ಎಂದು ಅವರು ಹೇಳಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ ಸಿಪಿಐಎಂನ 23 ನೇ ಮಹಾಅಧಿವೇಶನದಲ್ಲಿ ಮಾತನಾಡಿದ ಅವರು, “ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ, ಈಗ ಹೆಚ್ಚು ಯುವಕರು ನಮ್ಮೊಂದಿಗೆ ಹೊಂದಿಕೊಂಡಿದ್ದಾರೆ. ನಾವು ಅವರಿಗೆ ಆಳವಾದ ಪಕ್ಷದ ತರಗತಿಗಳನ್ನು ನೀಡಬೇಕು. ಕಮ್ಯುನಿಸ್ಟ್ ಚೌಕಟ್ಟು ಮತ್ತು ಸಿದ್ಧಾಂತದ ಪ್ರಕಾರ ಅವರನ್ನು ಸಿದ್ಧಪಡಿಸಬೇಕು. ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಸಿಪಿಐಎಂ ಮತ್ತೊಮ್ಮೆ ರಾಜ್ಯದಲ್ಲಿ ತನ್ನ ಹಿಂದಿನ ವೈಭವ ಮತ್ತು ಶಕ್ತಿಗೆ ಮರಳಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಮತ್ತು 23ನೇ ಪಕ್ಷದ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ನಿರ್ಣಯಗಳನ್ನು ಅನುಸರಿಸಿ ನಾವು ಪಕ್ಷವನ್ನು ಮರುಸಂಘಟಿಸಿ ಬಲಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ರಾಜ್ಯದಲ್ಲಿ 11 ವರ್ಷಗಳ ತೃಣಮೂಲ ಮತ್ತು ಒಕ್ಕೂಟ ಸರ್ಕಾರದಲ್ಲಿ ಎಂಟು ವರ್ಷಗಳ ಮೋದಿ ಆಡಳಿತದಿಂದ ಬೇಸತ್ತಿರುವ ಜನರು ಈಗ ಬದಲಾವಣೆ ಬಯಸುತ್ತಿದ್ದಾರೆ. ಎಡಪಕ್ಷಗಳ ಪ್ರಸ್ತುತತೆ ಮತ್ತು ಪ್ರಾಮುಖ್ಯತೆಯನ್ನು ನಾವು ಅವರಿಗೆ ನೆನಪಿಸಬೇಕು ಎಂದು ಸಲೀಂ ಹೇಳಿದ್ದಾರೆ.

“ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರ ಜಾರಿಗೊಳಿಸಿದ ವಿವಿಧ ಪ್ರಗತಿಪರ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳು ಬಂಗಾಳದ ಜನರಿಗೆ ಮಾದರಿಯಾಗಬೇಕು. ಹಿಂದಿನ ವರ್ಷಗಳಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಎಡ ಸರ್ಕಾರಗಳ ಜನಕೇಂದ್ರಿತ ಆಡಳಿತವನ್ನು ನಾವು ಅವರಿಗೆ ನೆನಪಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ರಾಜ್ಯದಲ್ಲಿ ಸಿಪಿಐಎಂ ನೆಲೆಯನ್ನು ನಾಶಪಡಿಸಲು ತೃಣಮೂಲ ತೀವ್ರ ಪ್ರಯತ್ನ ನಡೆಸುತ್ತಿದೆ. ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳು ಅದಕ್ಕೆ ಸಾಕ್ಷಿ. ಪಕ್ಷದ ಕಾರ್ಯಕರ್ತರು ಪ್ರಬಲ ಪ್ರತಿರೋಧವನ್ನು ತೋರಿಸುತ್ತಾರೆ, ಆದರೆ ಅಸುರಕ್ಷಿತ ಸ್ಥಿತಿಯಲ್ಲಿದ್ದಾರೆ. ನಾವು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಬೇಕು ಮತ್ತು ಇಂತಹ ಕ್ರಮಗಳ ವಿರುದ್ಧ ಅವರನ್ನು ಒಗ್ಗೂಡಿಸಬೇಕು” ಎಂದು ಸಲೀಂ ತಿಳಿಸಿದ್ದಾರೆ.

“ಬಲಪಂಥೀಯರು ರಾಷ್ಟ್ರೀಯ ಮಾಧ್ಯಮಗಳ ಬಲವಾದ ಬೆಂಬಲದೊಂದಿಗೆ ಕೇಂದ್ರದಲ್ಲಿ ಮೋದಿ ಮತ್ತು ಬಂಗಾಳದಲ್ಲಿ ದೀದಿ ಮಾತ್ರ ಇದ್ದಾರೆ, ದೇಶದಲ್ಲಿ ಬೇರೆ ಯಾರೂ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಎಡಪಂಥೀಯರ ಕೊಡುಗೆಗಳನ್ನು ಮತ್ತು ಅಸ್ತಿತ್ವವನ್ನೇ ದೂರವಿಡಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತದೆ. ಆದರೆ ಅದು ಸುಲಭವಲ್ಲ, ಎಡಪಕ್ಷವು ಬಂಗಾಳದ ಸಾಮಾಜಿಕ ಮತ್ತು ಸಾಂಸ್ಕೃತಿಕ ರಚನೆಯಲ್ಲೆ ಇದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

“ಎಡಪಂಥೀಯರು ಅತ್ಯಂತ ಪ್ರಯಾಸಕರ ಸಮಯದಲ್ಲೂ ಆ ಸಂಪರ್ಕವನ್ನು ಅಖಂಡವಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮ ಮತ್ತು ಜಾತಿಯ ಆಧಾರದಲ್ಲಿ ರಾಜ್ಯವನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಅಂತಹ ಎಲ್ಲಾ ಪ್ರಯತ್ನಗಳನ್ನು ನಾವು ವಿರೋಧಿಸಬೇಕು. ಎಡಪಂಥೀಯರ ಕೊಡುಗೆಯ ನೆನಪುಗಳನ್ನು ಜನರಲ್ಲಿ ಜೀವಂತವಾಗಿ ಕಾಪಾಡುವ ಜವಾಬ್ದಾರಿ ಬಂಗಾಳದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಕಾರ್ಮಿಕ ವರ್ಗದ ಮೇಲಿದೆ” ಎಂದು ಅವರು ಹೇಳಿದ್ದಾರೆ.

“ಬಂಗಾಳದಲ್ಲಿ ಇತ್ತೀಚೆಗೆ ನಡೆದ ಮುನ್ಸಿಪಲ್ ಚುನಾವಣೆಯನ್ನು ತೃಣಮೂಲ ಪಕ್ಷ ಹಾಳು ಮಾಡಿದೆ. ಎಡಪಕ್ಷಗಳ ಭದ್ರಕೋಟೆಯಾಗಿರುವ ಕ್ಷೇತ್ರಗಳಲ್ಲಿ ಅವರು ವಿಶೇಷವಾಗಿ ಹಿಂಸಾಚಾರ ನಡೆಸಿದ್ದಾರೆ. ನಮ್ಮ ಕೆಲವು ಅಭ್ಯರ್ಥಿಗಳಿಗೆ ಪ್ರಚಾರ ಕೂಡ ಸಾಧ್ಯವಾಗಿರಲಿಲ್ಲ. ಆದರೂ, ನಮ್ಮ ಮತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದೇವೆ. ಜನರು ಬದಲಾವಣೆ ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಅವರು ಹೇಲಿದ್ದಾರೆ.

“ಹೊಸದಾಗಿ ರಚನೆಯಾಗಿರುವ ರಾಜ್ಯ ಸಮಿತಿಯಲ್ಲಿ 30%ದಷ್ಟು ಯುವಕರು ಇದ್ದಾರೆ. ಹೆಚ್ಚಿನ ಯುವಕರು ಸಿಪಿಐ-ಎಂ ಸೇರಲು ಬರುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷವು ಮತ್ತೊಮ್ಮೆ ಹುಟ್ಟಿಕೊಳ್ಳುವುದು ಖಂಡಿತ. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಈಗಾಗಲೇ ಆರಂಭವಾಗಿದೆ” ಎಂದು ಸಲೀಂ ಹೇಳಿದ್ದಾರೆ.

“ಬಂಗಾಳದಲ್ಲಿ ಸಿಪಿಐಎಂ ಬಿಜೆಪಿಯೊಂದಿಗೆ ಸೌಮ್ಯ ಧೋರಣೆ ಅನುಸರಿಸುತ್ತಿದೆ ಎಂಬ ಪ್ರಚಾರ ಸಂಪೂರ್ಣವಾಗಿ ಸರಿಯಲ್ಲ. ಇಂತಹ ಪ್ರಚಾರಗಳು ‘ನಾಗ್ಪುರದ ಮೆದುಳಿನಿಂದ ಹುಟ್ಟಿದ ಕೂಸು’. ಬಂಗಾಳದಲ್ಲಾಗಲಿ ಅಥವಾ ಬೇರೆಲ್ಲಿಯಾದರೂ, ಎಡಪಂಥೀಯರು ಬಲಪಂಥೀಯ ಶಕ್ತಿಗಳ ಕಡೆಗೆ ಸೌಮ್ಯವಾದ ವಿಧಾನವನ್ನು ಅಳವಡಿಸಿಕೊಳ್ಳುವುದಿಲ್ಲ. ಬಲಪಂಥೀಯರು ಮೊದಲಿಗೆ ಮತ್ತು ಪ್ರಮುಖವಾಗಿ ನಮ್ಮ ಮೇಲೆ ದಾಳಿ ಮಾಡುತ್ತಾರೆ. ಯಾಕೆಂದರೆ ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುವ ಏಕೈಕ ಶಕ್ತಿ ಎಡಪಂಥೀಯರು ಮಾತ್ರ. ಇದು ಬಂಗಾಳದಲ್ಲೂ ಭಿನ್ನವಾಗಿಲ್ಲ” ಎಂದು ಮೊಹಮ್ಮದ್‌ ಸಲೀಂ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...